ಮಿಕ 7 : 1 (KNV)
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ಮಿಕ 7 : 2 (KNV)
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಮಿಕ 7 : 3 (KNV)
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಮಿಕ 7 : 4 (KNV)
ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
ಮಿಕ 7 : 5 (KNV)
ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
ಮಿಕ 7 : 6 (KNV)
ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
ಮಿಕ 7 : 7 (KNV)
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ಮಿಕ 7 : 8 (KNV)
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ಮಿಕ 7 : 9 (KNV)
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ಮಿಕ 7 : 10 (KNV)
ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
ಮಿಕ 7 : 11 (KNV)
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
ಮಿಕ 7 : 12 (KNV)
ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
ಮಿಕ 7 : 13 (KNV)
ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
ಮಿಕ 7 : 14 (KNV)
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಮಿಕ 7 : 15 (KNV)
ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
ಮಿಕ 7 : 16 (KNV)
ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ಮಿಕ 7 : 17 (KNV)
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
ಮಿಕ 7 : 18 (KNV)
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಮಿಕ 7 : 19 (KNV)
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಮಿಕ 7 : 20 (KNV)
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: