ಅರಣ್ಯಕಾಂಡ 14 : 1 (KNV)
ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
ಅರಣ್ಯಕಾಂಡ 14 : 2 (KNV)
ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ಅರಣ್ಯಕಾಂಡ 14 : 3 (KNV)
ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ಅರಣ್ಯಕಾಂಡ 14 : 4 (KNV)
ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
ಅರಣ್ಯಕಾಂಡ 14 : 5 (KNV)
ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
ಅರಣ್ಯಕಾಂಡ 14 : 6 (KNV)
ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
ಅರಣ್ಯಕಾಂಡ 14 : 7 (KNV)
ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
ಅರಣ್ಯಕಾಂಡ 14 : 8 (KNV)
ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
ಅರಣ್ಯಕಾಂಡ 14 : 9 (KNV)
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಅರಣ್ಯಕಾಂಡ 14 : 10 (KNV)
ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
ಅರಣ್ಯಕಾಂಡ 14 : 11 (KNV)
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಅರಣ್ಯಕಾಂಡ 14 : 12 (KNV)
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
ಅರಣ್ಯಕಾಂಡ 14 : 13 (KNV)
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ಅರಣ್ಯಕಾಂಡ 14 : 14 (KNV)
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಅರಣ್ಯಕಾಂಡ 14 : 15 (KNV)
ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
ಅರಣ್ಯಕಾಂಡ 14 : 16 (KNV)
ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
ಅರಣ್ಯಕಾಂಡ 14 : 17 (KNV)
ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
ಅರಣ್ಯಕಾಂಡ 14 : 18 (KNV)
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಅರಣ್ಯಕಾಂಡ 14 : 19 (KNV)
ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
ಅರಣ್ಯಕಾಂಡ 14 : 20 (KNV)
ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
ಅರಣ್ಯಕಾಂಡ 14 : 21 (KNV)
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಅರಣ್ಯಕಾಂಡ 14 : 22 (KNV)
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಅರಣ್ಯಕಾಂಡ 14 : 23 (KNV)
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
ಅರಣ್ಯಕಾಂಡ 14 : 24 (KNV)
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
ಅರಣ್ಯಕಾಂಡ 14 : 25 (KNV)
(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
ಅರಣ್ಯಕಾಂಡ 14 : 26 (KNV)
ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
ಅರಣ್ಯಕಾಂಡ 14 : 27 (KNV)
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
ಅರಣ್ಯಕಾಂಡ 14 : 28 (KNV)
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಅರಣ್ಯಕಾಂಡ 14 : 29 (KNV)
ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
ಅರಣ್ಯಕಾಂಡ 14 : 30 (KNV)
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
ಅರಣ್ಯಕಾಂಡ 14 : 31 (KNV)
ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
ಅರಣ್ಯಕಾಂಡ 14 : 32 (KNV)
ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
ಅರಣ್ಯಕಾಂಡ 14 : 33 (KNV)
ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
ಅರಣ್ಯಕಾಂಡ 14 : 34 (KNV)
ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ಅರಣ್ಯಕಾಂಡ 14 : 35 (KNV)
ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
ಅರಣ್ಯಕಾಂಡ 14 : 36 (KNV)
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
ಅರಣ್ಯಕಾಂಡ 14 : 37 (KNV)
ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
ಅರಣ್ಯಕಾಂಡ 14 : 38 (KNV)
ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
ಅರಣ್ಯಕಾಂಡ 14 : 39 (KNV)
ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
ಅರಣ್ಯಕಾಂಡ 14 : 40 (KNV)
ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
ಅರಣ್ಯಕಾಂಡ 14 : 41 (KNV)
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಅರಣ್ಯಕಾಂಡ 14 : 42 (KNV)
ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
ಅರಣ್ಯಕಾಂಡ 14 : 43 (KNV)
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ಅರಣ್ಯಕಾಂಡ 14 : 44 (KNV)
ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
ಅರಣ್ಯಕಾಂಡ 14 : 45 (KNV)
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45

BG:

Opacity:

Color:


Size:


Font: