ಅರಣ್ಯಕಾಂಡ 17 : 1 (KNV)
ಕರ್ತನು ಮೋಶೆಯ ಸಂಗಡ ಮಾತ ನಾಡಿ--
ಅರಣ್ಯಕಾಂಡ 17 : 2 (KNV)
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
ಅರಣ್ಯಕಾಂಡ 17 : 3 (KNV)
ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
ಅರಣ್ಯಕಾಂಡ 17 : 4 (KNV)
ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
ಅರಣ್ಯಕಾಂಡ 17 : 5 (KNV)
ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
ಅರಣ್ಯಕಾಂಡ 17 : 6 (KNV)
ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
ಅರಣ್ಯಕಾಂಡ 17 : 7 (KNV)
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
ಅರಣ್ಯಕಾಂಡ 17 : 8 (KNV)
ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ಅರಣ್ಯಕಾಂಡ 17 : 9 (KNV)
ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
ಅರಣ್ಯಕಾಂಡ 17 : 10 (KNV)
ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
ಅರಣ್ಯಕಾಂಡ 17 : 11 (KNV)
ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
ಅರಣ್ಯಕಾಂಡ 17 : 12 (KNV)
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.
ಅರಣ್ಯಕಾಂಡ 17 : 13 (KNV)
ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

1 2 3 4 5 6 7 8 9 10 11 12 13