ಅರಣ್ಯಕಾಂಡ 29 : 1 (KNV)
ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
ಅರಣ್ಯಕಾಂಡ 29 : 2 (KNV)
ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
ಅರಣ್ಯಕಾಂಡ 29 : 3 (KNV)
ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,
ಅರಣ್ಯಕಾಂಡ 29 : 4 (KNV)
ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
ಅರಣ್ಯಕಾಂಡ 29 : 5 (KNV)
ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
ಅರಣ್ಯಕಾಂಡ 29 : 6 (KNV)
ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
ಅರಣ್ಯಕಾಂಡ 29 : 7 (KNV)
ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
ಅರಣ್ಯಕಾಂಡ 29 : 8 (KNV)
ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
ಅರಣ್ಯಕಾಂಡ 29 : 9 (KNV)
ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
ಅರಣ್ಯಕಾಂಡ 29 : 10 (KNV)
ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
ಅರಣ್ಯಕಾಂಡ 29 : 11 (KNV)
ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 12 (KNV)
ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಅರಣ್ಯಕಾಂಡ 29 : 13 (KNV)
ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
ಅರಣ್ಯಕಾಂಡ 29 : 14 (KNV)
ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
ಅರಣ್ಯಕಾಂಡ 29 : 15 (KNV)
ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
ಅರಣ್ಯಕಾಂಡ 29 : 16 (KNV)
ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 17 (KNV)
ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 18 (KNV)
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 19 (KNV)
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 20 (KNV)
ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 21 (KNV)
ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 22 (KNV)
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 23 (KNV)
ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 24 (KNV)
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 25 (KNV)
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 26 (KNV)
ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 27 (KNV)
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ
ಅರಣ್ಯಕಾಂಡ 29 : 28 (KNV)
ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 29 (KNV)
ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 30 (KNV)
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 31 (KNV)
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 32 (KNV)
ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅರಣ್ಯಕಾಂಡ 29 : 33 (KNV)
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 34 (KNV)
ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 35 (KNV)
ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.
ಅರಣ್ಯಕಾಂಡ 29 : 36 (KNV)
ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
ಅರಣ್ಯಕಾಂಡ 29 : 37 (KNV)
ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ಅರಣ್ಯಕಾಂಡ 29 : 38 (KNV)
ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅರಣ್ಯಕಾಂಡ 29 : 39 (KNV)
ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು
ಅರಣ್ಯಕಾಂಡ 29 : 40 (KNV)
ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40