ಅರಣ್ಯಕಾಂಡ 3 : 1 (KNV)
ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
ಅರಣ್ಯಕಾಂಡ 3 : 2 (KNV)
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ಅರಣ್ಯಕಾಂಡ 3 : 3 (KNV)
ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
ಅರಣ್ಯಕಾಂಡ 3 : 4 (KNV)
ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
ಅರಣ್ಯಕಾಂಡ 3 : 5 (KNV)
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
ಅರಣ್ಯಕಾಂಡ 3 : 6 (KNV)
ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
ಅರಣ್ಯಕಾಂಡ 3 : 7 (KNV)
ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
ಅರಣ್ಯಕಾಂಡ 3 : 8 (KNV)
ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
ಅರಣ್ಯಕಾಂಡ 3 : 9 (KNV)
ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
ಅರಣ್ಯಕಾಂಡ 3 : 10 (KNV)
ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
ಅರಣ್ಯಕಾಂಡ 3 : 11 (KNV)
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
ಅರಣ್ಯಕಾಂಡ 3 : 12 (KNV)
ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
ಅರಣ್ಯಕಾಂಡ 3 : 13 (KNV)
ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
ಅರಣ್ಯಕಾಂಡ 3 : 14 (KNV)
ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
ಅರಣ್ಯಕಾಂಡ 3 : 15 (KNV)
ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
ಅರಣ್ಯಕಾಂಡ 3 : 16 (KNV)
ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
ಅರಣ್ಯಕಾಂಡ 3 : 17 (KNV)
ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
ಅರಣ್ಯಕಾಂಡ 3 : 18 (KNV)
ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.
ಅರಣ್ಯಕಾಂಡ 3 : 19 (KNV)
ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
ಅರಣ್ಯಕಾಂಡ 3 : 20 (KNV)
ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
ಅರಣ್ಯಕಾಂಡ 3 : 21 (KNV)
ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.
ಅರಣ್ಯಕಾಂಡ 3 : 22 (KNV)
ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
ಅರಣ್ಯಕಾಂಡ 3 : 23 (KNV)
ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.
ಅರಣ್ಯಕಾಂಡ 3 : 24 (KNV)
ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.
ಅರಣ್ಯಕಾಂಡ 3 : 25 (KNV)
ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
ಅರಣ್ಯಕಾಂಡ 3 : 26 (KNV)
ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
ಅರಣ್ಯಕಾಂಡ 3 : 27 (KNV)
ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
ಅರಣ್ಯಕಾಂಡ 3 : 28 (KNV)
ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
ಅರಣ್ಯಕಾಂಡ 3 : 29 (KNV)
ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
ಅರಣ್ಯಕಾಂಡ 3 : 30 (KNV)
ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
ಅರಣ್ಯಕಾಂಡ 3 : 31 (KNV)
ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
ಅರಣ್ಯಕಾಂಡ 3 : 32 (KNV)
ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
ಅರಣ್ಯಕಾಂಡ 3 : 33 (KNV)
ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
ಅರಣ್ಯಕಾಂಡ 3 : 34 (KNV)
ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.
ಅರಣ್ಯಕಾಂಡ 3 : 35 (KNV)
ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
ಅರಣ್ಯಕಾಂಡ 3 : 36 (KNV)
ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
ಅರಣ್ಯಕಾಂಡ 3 : 37 (KNV)
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
ಅರಣ್ಯಕಾಂಡ 3 : 38 (KNV)
ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
ಅರಣ್ಯಕಾಂಡ 3 : 39 (KNV)
ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
ಅರಣ್ಯಕಾಂಡ 3 : 40 (KNV)
ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
ಅರಣ್ಯಕಾಂಡ 3 : 41 (KNV)
ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
ಅರಣ್ಯಕಾಂಡ 3 : 42 (KNV)
ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
ಅರಣ್ಯಕಾಂಡ 3 : 43 (KNV)
ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
ಅರಣ್ಯಕಾಂಡ 3 : 44 (KNV)
ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
ಅರಣ್ಯಕಾಂಡ 3 : 45 (KNV)
ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
ಅರಣ್ಯಕಾಂಡ 3 : 46 (KNV)
ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
ಅರಣ್ಯಕಾಂಡ 3 : 47 (KNV)
ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
ಅರಣ್ಯಕಾಂಡ 3 : 48 (KNV)
ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
ಅರಣ್ಯಕಾಂಡ 3 : 49 (KNV)
ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
ಅರಣ್ಯಕಾಂಡ 3 : 50 (KNV)
ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.
ಅರಣ್ಯಕಾಂಡ 3 : 51 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51