ಅರಣ್ಯಕಾಂಡ 34 : 1 (KNV)
ಕರ್ತನು ಮೋಶೆಯ ಸಂಗಡ ಮಾತನಾಡಿ--
ಅರಣ್ಯಕಾಂಡ 34 : 2 (KNV)
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ಅರಣ್ಯಕಾಂಡ 34 : 3 (KNV)
ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ಅರಣ್ಯಕಾಂಡ 34 : 4 (KNV)
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
ಅರಣ್ಯಕಾಂಡ 34 : 5 (KNV)
ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
ಅರಣ್ಯಕಾಂಡ 34 : 6 (KNV)
ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
ಅರಣ್ಯಕಾಂಡ 34 : 7 (KNV)
ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
ಅರಣ್ಯಕಾಂಡ 34 : 8 (KNV)
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
ಅರಣ್ಯಕಾಂಡ 34 : 9 (KNV)
ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
ಅರಣ್ಯಕಾಂಡ 34 : 10 (KNV)
ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
ಅರಣ್ಯಕಾಂಡ 34 : 11 (KNV)
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಅರಣ್ಯಕಾಂಡ 34 : 12 (KNV)
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
ಅರಣ್ಯಕಾಂಡ 34 : 13 (KNV)
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
ಅರಣ್ಯಕಾಂಡ 34 : 14 (KNV)
ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
ಅರಣ್ಯಕಾಂಡ 34 : 15 (KNV)
ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
ಅರಣ್ಯಕಾಂಡ 34 : 16 (KNV)
ಕರ್ತನು ಮೋಶೆಯ ಸಂಗಡ ಮಾತನಾಡಿ
ಅರಣ್ಯಕಾಂಡ 34 : 17 (KNV)
ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
ಅರಣ್ಯಕಾಂಡ 34 : 18 (KNV)
ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
ಅರಣ್ಯಕಾಂಡ 34 : 19 (KNV)
ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
ಅರಣ್ಯಕಾಂಡ 34 : 20 (KNV)
ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ
ಅರಣ್ಯಕಾಂಡ 34 : 21 (KNV)
ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ
ಅರಣ್ಯಕಾಂಡ 34 : 22 (KNV)
ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ
ಅರಣ್ಯಕಾಂಡ 34 : 23 (KNV)
ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ
ಅರಣ್ಯಕಾಂಡ 34 : 24 (KNV)
ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ
ಅರಣ್ಯಕಾಂಡ 34 : 25 (KNV)
ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ
ಅರಣ್ಯಕಾಂಡ 34 : 26 (KNV)
ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ
ಅರಣ್ಯಕಾಂಡ 34 : 27 (KNV)
ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
ಅರಣ್ಯಕಾಂಡ 34 : 28 (KNV)
ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.
ಅರಣ್ಯಕಾಂಡ 34 : 29 (KNV)
ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29