ಮತ್ತಾಯನು 1 : 1 (KNV)
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಮತ್ತಾಯನು 1 : 2 (KNV)
ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
ಮತ್ತಾಯನು 1 : 3 (KNV)
ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
ಮತ್ತಾಯನು 1 : 4 (KNV)
ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
ಮತ್ತಾಯನು 1 : 5 (KNV)
ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
ಮತ್ತಾಯನು 1 : 6 (KNV)
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
ಮತ್ತಾಯನು 1 : 7 (KNV)
ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
ಮತ್ತಾಯನು 1 : 8 (KNV)
ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
ಮತ್ತಾಯನು 1 : 9 (KNV)
ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
ಮತ್ತಾಯನು 1 : 10 (KNV)
ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
ಮತ್ತಾಯನು 1 : 11 (KNV)
ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
ಮತ್ತಾಯನು 1 : 12 (KNV)
ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
ಮತ್ತಾಯನು 1 : 13 (KNV)
ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;
ಮತ್ತಾಯನು 1 : 14 (KNV)
ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
ಮತ್ತಾಯನು 1 : 15 (KNV)
ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;
ಮತ್ತಾಯನು 1 : 16 (KNV)
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಮತ್ತಾಯನು 1 : 17 (KNV)
ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
ಮತ್ತಾಯನು 1 : 18 (KNV)
ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
ಮತ್ತಾಯನು 1 : 19 (KNV)
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
ಮತ್ತಾಯನು 1 : 20 (KNV)
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಮತ್ತಾಯನು 1 : 21 (KNV)
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಮತ್ತಾಯನು 1 : 22 (KNV)
ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
ಮತ್ತಾಯನು 1 : 23 (KNV)
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಮತ್ತಾಯನು 1 : 24 (KNV)
ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
ಮತ್ತಾಯನು 1 : 25 (KNV)
ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: