ಮತ್ತಾಯನು 10 : 1 (KNV)
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ಮತ್ತಾಯನು 10 : 2 (KNV)
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
ಮತ್ತಾಯನು 10 : 3 (KNV)
ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
ಮತ್ತಾಯನು 10 : 4 (KNV)
ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
ಮತ್ತಾಯನು 10 : 5 (KNV)
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ಮತ್ತಾಯನು 10 : 6 (KNV)
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
ಮತ್ತಾಯನು 10 : 7 (KNV)
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
ಮತ್ತಾಯನು 10 : 8 (KNV)
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಮತ್ತಾಯನು 10 : 9 (KNV)
ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
ಮತ್ತಾಯನು 10 : 10 (KNV)
ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ಮತ್ತಾಯನು 10 : 11 (KNV)
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
ಮತ್ತಾಯನು 10 : 12 (KNV)
ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
ಮತ್ತಾಯನು 10 : 13 (KNV)
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ಮತ್ತಾಯನು 10 : 14 (KNV)
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ಮತ್ತಾಯನು 10 : 15 (KNV)
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
ಮತ್ತಾಯನು 10 : 16 (KNV)
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಮತ್ತಾಯನು 10 : 17 (KNV)
ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ಮತ್ತಾಯನು 10 : 18 (KNV)
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಮತ್ತಾಯನು 10 : 19 (KNV)
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಮತ್ತಾಯನು 10 : 20 (KNV)
ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
ಮತ್ತಾಯನು 10 : 21 (KNV)
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಮತ್ತಾಯನು 10 : 22 (KNV)
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಮತ್ತಾಯನು 10 : 23 (KNV)
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 10 : 24 (KNV)
ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
ಮತ್ತಾಯನು 10 : 25 (KNV)
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಮತ್ತಾಯನು 10 : 26 (KNV)
ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
ಮತ್ತಾಯನು 10 : 27 (KNV)
ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
ಮತ್ತಾಯನು 10 : 28 (KNV)
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಮತ್ತಾಯನು 10 : 29 (KNV)
ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
ಮತ್ತಾಯನು 10 : 30 (KNV)
ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
ಮತ್ತಾಯನು 10 : 31 (KNV)
ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
ಮತ್ತಾಯನು 10 : 32 (KNV)
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಮತ್ತಾಯನು 10 : 33 (KNV)
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
ಮತ್ತಾಯನು 10 : 34 (KNV)
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ಮತ್ತಾಯನು 10 : 35 (KNV)
ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
ಮತ್ತಾಯನು 10 : 36 (KNV)
ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
ಮತ್ತಾಯನು 10 : 37 (KNV)
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಮತ್ತಾಯನು 10 : 38 (KNV)
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
ಮತ್ತಾಯನು 10 : 39 (KNV)
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಮತ್ತಾಯನು 10 : 40 (KNV)
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಮತ್ತಾಯನು 10 : 41 (KNV)
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
ಮತ್ತಾಯನು 10 : 42 (KNV)
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
❮
❯