ಮತ್ತಾಯನು 11 : 1 (KNV)
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ಮತ್ತಾಯನು 11 : 2 (KNV)
ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
ಮತ್ತಾಯನು 11 : 3 (KNV)
ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
ಮತ್ತಾಯನು 11 : 4 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
ಮತ್ತಾಯನು 11 : 5 (KNV)
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಮತ್ತಾಯನು 11 : 6 (KNV)
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
ಮತ್ತಾಯನು 11 : 7 (KNV)
ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಮತ್ತಾಯನು 11 : 8 (KNV)
ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
ಮತ್ತಾಯನು 11 : 9 (KNV)
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
ಮತ್ತಾಯನು 11 : 10 (KNV)
ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
ಮತ್ತಾಯನು 11 : 11 (KNV)
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
ಮತ್ತಾಯನು 11 : 12 (KNV)
ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
ಮತ್ತಾಯನು 11 : 13 (KNV)
ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
ಮತ್ತಾಯನು 11 : 14 (KNV)
ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
ಮತ್ತಾಯನು 11 : 15 (KNV)
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಮತ್ತಾಯನು 11 : 16 (KNV)
ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
ಮತ್ತಾಯನು 11 : 17 (KNV)
ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
ಮತ್ತಾಯನು 11 : 18 (KNV)
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ಮತ್ತಾಯನು 11 : 19 (KNV)
ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
ಮತ್ತಾಯನು 11 : 20 (KNV)
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಮತ್ತಾಯನು 11 : 21 (KNV)
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಮತ್ತಾಯನು 11 : 22 (KNV)
ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
ಮತ್ತಾಯನು 11 : 23 (KNV)
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ಮತ್ತಾಯನು 11 : 24 (KNV)
ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
ಮತ್ತಾಯನು 11 : 25 (KNV)
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಮತ್ತಾಯನು 11 : 26 (KNV)
ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
ಮತ್ತಾಯನು 11 : 27 (KNV)
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಮತ್ತಾಯನು 11 : 28 (KNV)
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಮತ್ತಾಯನು 11 : 29 (KNV)
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
ಮತ್ತಾಯನು 11 : 30 (KNV)
ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
❮
❯