ಮತ್ತಾಯನು 14 : 1 (KNV)
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
ಮತ್ತಾಯನು 14 : 2 (KNV)
ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
ಮತ್ತಾಯನು 14 : 3 (KNV)
ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
ಮತ್ತಾಯನು 14 : 4 (KNV)
ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
ಮತ್ತಾಯನು 14 : 5 (KNV)
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಮತ್ತಾಯನು 14 : 6 (KNV)
ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
ಮತ್ತಾಯನು 14 : 7 (KNV)
ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
ಮತ್ತಾಯನು 14 : 8 (KNV)
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
ಮತ್ತಾಯನು 14 : 9 (KNV)
ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
ಮತ್ತಾಯನು 14 : 10 (KNV)
ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
ಮತ್ತಾಯನು 14 : 11 (KNV)
ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
ಮತ್ತಾಯನು 14 : 12 (KNV)
ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
ಮತ್ತಾಯನು 14 : 13 (KNV)
ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
ಮತ್ತಾಯನು 14 : 14 (KNV)
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಮತ್ತಾಯನು 14 : 15 (KNV)
ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
ಮತ್ತಾಯನು 14 : 16 (KNV)
ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
ಮತ್ತಾಯನು 14 : 17 (KNV)
ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
ಮತ್ತಾಯನು 14 : 18 (KNV)
ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
ಮತ್ತಾಯನು 14 : 19 (KNV)
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಮತ್ತಾಯನು 14 : 20 (KNV)
ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
ಮತ್ತಾಯನು 14 : 21 (KNV)
ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
ಮತ್ತಾಯನು 14 : 22 (KNV)
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ಮತ್ತಾಯನು 14 : 23 (KNV)
ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
ಮತ್ತಾಯನು 14 : 24 (KNV)
ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
ಮತ್ತಾಯನು 14 : 25 (KNV)
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
ಮತ್ತಾಯನು 14 : 26 (KNV)
ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
ಮತ್ತಾಯನು 14 : 27 (KNV)
ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
ಮತ್ತಾಯನು 14 : 28 (KNV)
ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
ಮತ್ತಾಯನು 14 : 29 (KNV)
ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
ಮತ್ತಾಯನು 14 : 30 (KNV)
ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
ಮತ್ತಾಯನು 14 : 31 (KNV)
ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
ಮತ್ತಾಯನು 14 : 32 (KNV)
ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
ಮತ್ತಾಯನು 14 : 33 (KNV)
ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
ಮತ್ತಾಯನು 14 : 34 (KNV)
ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.
ಮತ್ತಾಯನು 14 : 35 (KNV)
ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
ಮತ್ತಾಯನು 14 : 36 (KNV)
ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: