ಮತ್ತಾಯನು 23 : 1 (KNV)
ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
ಮತ್ತಾಯನು 23 : 2 (KNV)
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
ಮತ್ತಾಯನು 23 : 3 (KNV)
ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ಮತ್ತಾಯನು 23 : 4 (KNV)
ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
ಮತ್ತಾಯನು 23 : 5 (KNV)
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಮತ್ತಾಯನು 23 : 6 (KNV)
ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
ಮತ್ತಾಯನು 23 : 7 (KNV)
ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
ಮತ್ತಾಯನು 23 : 8 (KNV)
ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ಮತ್ತಾಯನು 23 : 9 (KNV)
ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
ಮತ್ತಾಯನು 23 : 10 (KNV)
ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
ಮತ್ತಾಯನು 23 : 11 (KNV)
ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
ಮತ್ತಾಯನು 23 : 12 (KNV)
ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಮತ್ತಾಯನು 23 : 13 (KNV)
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಮತ್ತಾಯನು 23 : 14 (KNV)
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
ಮತ್ತಾಯನು 23 : 15 (KNV)
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ಮತ್ತಾಯನು 23 : 16 (KNV)
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಮತ್ತಾಯನು 23 : 17 (KNV)
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ಮತ್ತಾಯನು 23 : 18 (KNV)
ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
ಮತ್ತಾಯನು 23 : 19 (KNV)
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
ಮತ್ತಾಯನು 23 : 20 (KNV)
ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
ಮತ್ತಾಯನು 23 : 21 (KNV)
ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
ಮತ್ತಾಯನು 23 : 22 (KNV)
ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
ಮತ್ತಾಯನು 23 : 23 (KNV)
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಮತ್ತಾಯನು 23 : 24 (KNV)
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ಮತ್ತಾಯನು 23 : 25 (KNV)
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಮತ್ತಾಯನು 23 : 26 (KNV)
ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
ಮತ್ತಾಯನು 23 : 27 (KNV)
ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ಮತ್ತಾಯನು 23 : 28 (KNV)
ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
ಮತ್ತಾಯನು 23 : 29 (KNV)
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ಮತ್ತಾಯನು 23 : 30 (KNV)
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
ಮತ್ತಾಯನು 23 : 31 (KNV)
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಮತ್ತಾಯನು 23 : 32 (KNV)
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
ಮತ್ತಾಯನು 23 : 33 (KNV)
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಮತ್ತಾಯನು 23 : 34 (KNV)
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಮತ್ತಾಯನು 23 : 35 (KNV)
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಮತ್ತಾಯನು 23 : 36 (KNV)
ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
ಮತ್ತಾಯನು 23 : 37 (KNV)
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಮತ್ತಾಯನು 23 : 38 (KNV)
ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮತ್ತಾಯನು 23 : 39 (KNV)
ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: