ಮತ್ತಾಯನು 24 : 1 (KNV)
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
ಮತ್ತಾಯನು 24 : 2 (KNV)
ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
ಮತ್ತಾಯನು 24 : 3 (KNV)
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಮತ್ತಾಯನು 24 : 4 (KNV)
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
ಮತ್ತಾಯನು 24 : 5 (KNV)
ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಮತ್ತಾಯನು 24 : 6 (KNV)
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
ಮತ್ತಾಯನು 24 : 7 (KNV)
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
ಮತ್ತಾಯನು 24 : 8 (KNV)
ಇವೆಲ್ಲವುಗಳು ಸಂಕಟಗಳ ಆರಂಭವು.
ಮತ್ತಾಯನು 24 : 9 (KNV)
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಮತ್ತಾಯನು 24 : 10 (KNV)
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಮತ್ತಾಯನು 24 : 11 (KNV)
ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
ಮತ್ತಾಯನು 24 : 12 (KNV)
ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
ಮತ್ತಾಯನು 24 : 13 (KNV)
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಮತ್ತಾಯನು 24 : 14 (KNV)
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
ಮತ್ತಾಯನು 24 : 15 (KNV)
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಮತ್ತಾಯನು 24 : 16 (KNV)
ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
ಮತ್ತಾಯನು 24 : 17 (KNV)
ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
ಮತ್ತಾಯನು 24 : 18 (KNV)
ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
ಮತ್ತಾಯನು 24 : 19 (KNV)
ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
ಮತ್ತಾಯನು 24 : 20 (KNV)
ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
ಮತ್ತಾಯನು 24 : 21 (KNV)
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಮತ್ತಾಯನು 24 : 22 (KNV)
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಮತ್ತಾಯನು 24 : 23 (KNV)
ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
ಮತ್ತಾಯನು 24 : 24 (KNV)
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಮತ್ತಾಯನು 24 : 25 (KNV)
ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
ಮತ್ತಾಯನು 24 : 26 (KNV)
ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
ಮತ್ತಾಯನು 24 : 27 (KNV)
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
ಮತ್ತಾಯನು 24 : 28 (KNV)
ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
ಮತ್ತಾಯನು 24 : 29 (KNV)
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಮತ್ತಾಯನು 24 : 30 (KNV)
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ಮತ್ತಾಯನು 24 : 31 (KNV)
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ಮತ್ತಾಯನು 24 : 32 (KNV)
ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
ಮತ್ತಾಯನು 24 : 33 (KNV)
ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
ಮತ್ತಾಯನು 24 : 34 (KNV)
ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 24 : 35 (KNV)
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಮತ್ತಾಯನು 24 : 36 (KNV)
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ಮತ್ತಾಯನು 24 : 37 (KNV)
ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ಮತ್ತಾಯನು 24 : 38 (KNV)
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ಮತ್ತಾಯನು 24 : 39 (KNV)
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ಮತ್ತಾಯನು 24 : 40 (KNV)
ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
ಮತ್ತಾಯನು 24 : 41 (KNV)
ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
ಮತ್ತಾಯನು 24 : 42 (KNV)
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಮತ್ತಾಯನು 24 : 43 (KNV)
ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
ಮತ್ತಾಯನು 24 : 44 (KNV)
ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಮತ್ತಾಯನು 24 : 45 (KNV)
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಮತ್ತಾಯನು 24 : 46 (KNV)
ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
ಮತ್ತಾಯನು 24 : 47 (KNV)
ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 24 : 48 (KNV)
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ಮತ್ತಾಯನು 24 : 49 (KNV)
ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
ಮತ್ತಾಯನು 24 : 50 (KNV)
ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು
ಮತ್ತಾಯನು 24 : 51 (KNV)
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
❮
❯