ಮತ್ತಾಯನು 27 : 1 (KNV)
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಮತ್ತಾಯನು 27 : 2 (KNV)
ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
ಮತ್ತಾಯನು 27 : 3 (KNV)
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಮತ್ತಾಯನು 27 : 4 (KNV)
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಮತ್ತಾಯನು 27 : 5 (KNV)
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
ಮತ್ತಾಯನು 27 : 6 (KNV)
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
ಮತ್ತಾಯನು 27 : 7 (KNV)
ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
ಮತ್ತಾಯನು 27 : 8 (KNV)
ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
ಮತ್ತಾಯನು 27 : 9 (KNV)
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
ಮತ್ತಾಯನು 27 : 10 (KNV)
ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
ಮತ್ತಾಯನು 27 : 11 (KNV)
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ಮತ್ತಾಯನು 27 : 12 (KNV)
ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
ಮತ್ತಾಯನು 27 : 13 (KNV)
ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
ಮತ್ತಾಯನು 27 : 14 (KNV)
ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
ಮತ್ತಾಯನು 27 : 15 (KNV)
ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
ಮತ್ತಾಯನು 27 : 16 (KNV)
ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
ಮತ್ತಾಯನು 27 : 17 (KNV)
ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
ಮತ್ತಾಯನು 27 : 18 (KNV)
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
ಮತ್ತಾಯನು 27 : 19 (KNV)
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ಮತ್ತಾಯನು 27 : 20 (KNV)
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ಮತ್ತಾಯನು 27 : 21 (KNV)
ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
ಮತ್ತಾಯನು 27 : 22 (KNV)
ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
ಮತ್ತಾಯನು 27 : 23 (KNV)
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಮತ್ತಾಯನು 27 : 24 (KNV)
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ಮತ್ತಾಯನು 27 : 25 (KNV)
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಮತ್ತಾಯನು 27 : 26 (KNV)
ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
ಮತ್ತಾಯನು 27 : 27 (KNV)
ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
ಮತ್ತಾಯನು 27 : 28 (KNV)
ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
ಮತ್ತಾಯನು 27 : 29 (KNV)
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ಮತ್ತಾಯನು 27 : 30 (KNV)
ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
ಮತ್ತಾಯನು 27 : 31 (KNV)
ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
ಮತ್ತಾಯನು 27 : 32 (KNV)
ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ಮತ್ತಾಯನು 27 : 33 (KNV)
ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
ಮತ್ತಾಯನು 27 : 34 (KNV)
ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
ಮತ್ತಾಯನು 27 : 35 (KNV)
ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
ಮತ್ತಾಯನು 27 : 36 (KNV)
ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
ಮತ್ತಾಯನು 27 : 37 (KNV)
ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
ಮತ್ತಾಯನು 27 : 38 (KNV)
ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
ಮತ್ತಾಯನು 27 : 39 (KNV)
ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
ಮತ್ತಾಯನು 27 : 40 (KNV)
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಮತ್ತಾಯನು 27 : 41 (KNV)
ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
ಮತ್ತಾಯನು 27 : 42 (KNV)
ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
ಮತ್ತಾಯನು 27 : 43 (KNV)
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಮತ್ತಾಯನು 27 : 44 (KNV)
ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
ಮತ್ತಾಯನು 27 : 45 (KNV)
ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ಮತ್ತಾಯನು 27 : 46 (KNV)
ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ಮತ್ತಾಯನು 27 : 47 (KNV)
ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
ಮತ್ತಾಯನು 27 : 48 (KNV)
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
ಮತ್ತಾಯನು 27 : 49 (KNV)
ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
ಮತ್ತಾಯನು 27 : 50 (KNV)
ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಮತ್ತಾಯನು 27 : 51 (KNV)
ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ಮತ್ತಾಯನು 27 : 52 (KNV)
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
ಮತ್ತಾಯನು 27 : 53 (KNV)
ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ಮತ್ತಾಯನು 27 : 54 (KNV)
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಮತ್ತಾಯನು 27 : 55 (KNV)
ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
ಮತ್ತಾಯನು 27 : 56 (KNV)
ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
ಮತ್ತಾಯನು 27 : 57 (KNV)
ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
ಮತ್ತಾಯನು 27 : 58 (KNV)
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
ಮತ್ತಾಯನು 27 : 59 (KNV)
ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
ಮತ್ತಾಯನು 27 : 60 (KNV)
ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
ಮತ್ತಾಯನು 27 : 61 (KNV)
ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
ಮತ್ತಾಯನು 27 : 62 (KNV)
ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
ಮತ್ತಾಯನು 27 : 63 (KNV)
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಮತ್ತಾಯನು 27 : 64 (KNV)
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
ಮತ್ತಾಯನು 27 : 65 (KNV)
ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.
ಮತ್ತಾಯನು 27 : 66 (KNV)
ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
❮
❯