ಮತ್ತಾಯನು 28 : 1 (KNV)
ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
ಮತ್ತಾಯನು 28 : 2 (KNV)
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ಮತ್ತಾಯನು 28 : 3 (KNV)
ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
ಮತ್ತಾಯನು 28 : 4 (KNV)
ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
ಮತ್ತಾಯನು 28 : 5 (KNV)
ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
ಮತ್ತಾಯನು 28 : 6 (KNV)
ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
ಮತ್ತಾಯನು 28 : 7 (KNV)
ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
ಮತ್ತಾಯನು 28 : 8 (KNV)
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
ಮತ್ತಾಯನು 28 : 9 (KNV)
ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
ಮತ್ತಾಯನು 28 : 10 (KNV)
ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
ಮತ್ತಾಯನು 28 : 11 (KNV)
ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
ಮತ್ತಾಯನು 28 : 12 (KNV)
ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
ಮತ್ತಾಯನು 28 : 13 (KNV)
ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
ಮತ್ತಾಯನು 28 : 14 (KNV)
ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
ಮತ್ತಾಯನು 28 : 15 (KNV)
ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
ಮತ್ತಾಯನು 28 : 16 (KNV)
ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
ಮತ್ತಾಯನು 28 : 17 (KNV)
ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
ಮತ್ತಾಯನು 28 : 18 (KNV)
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಮತ್ತಾಯನು 28 : 19 (KNV)
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ಮತ್ತಾಯನು 28 : 20 (KNV)
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
❮
❯