ಮಾರ್ಕನು 13 : 1 (KNV)
ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
ಮಾರ್ಕನು 13 : 2 (KNV)
ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
ಮಾರ್ಕನು 13 : 3 (KNV)
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ಮಾರ್ಕನು 13 : 4 (KNV)
ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
ಮಾರ್ಕನು 13 : 5 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
ಮಾರ್ಕನು 13 : 6 (KNV)
ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಮಾರ್ಕನು 13 : 7 (KNV)
ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
ಮಾರ್ಕನು 13 : 8 (KNV)
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
ಮಾರ್ಕನು 13 : 9 (KNV)
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಮಾರ್ಕನು 13 : 10 (KNV)
ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
ಮಾರ್ಕನು 13 : 11 (KNV)
ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
ಮಾರ್ಕನು 13 : 12 (KNV)
ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ಮಾರ್ಕನು 13 : 13 (KNV)
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
ಮಾರ್ಕನು 13 : 14 (KNV)
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಮಾರ್ಕನು 13 : 15 (KNV)
ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
ಮಾರ್ಕನು 13 : 16 (KNV)
ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
ಮಾರ್ಕನು 13 : 17 (KNV)
ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
ಮಾರ್ಕನು 13 : 18 (KNV)
ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
ಮಾರ್ಕನು 13 : 19 (KNV)
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ಮಾರ್ಕನು 13 : 20 (KNV)
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
ಮಾರ್ಕನು 13 : 21 (KNV)
ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
ಮಾರ್ಕನು 13 : 22 (KNV)
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ಮಾರ್ಕನು 13 : 23 (KNV)
ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
ಮಾರ್ಕನು 13 : 24 (KNV)
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಮಾರ್ಕನು 13 : 25 (KNV)
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
ಮಾರ್ಕನು 13 : 26 (KNV)
ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
ಮಾರ್ಕನು 13 : 27 (KNV)
ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
ಮಾರ್ಕನು 13 : 28 (KNV)
ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
ಮಾರ್ಕನು 13 : 29 (KNV)
ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
ಮಾರ್ಕನು 13 : 30 (KNV)
ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮಾರ್ಕನು 13 : 31 (KNV)
ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
ಮಾರ್ಕನು 13 : 32 (KNV)
ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
ಮಾರ್ಕನು 13 : 33 (KNV)
ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
ಮಾರ್ಕನು 13 : 34 (KNV)
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಮಾರ್ಕನು 13 : 35 (KNV)
ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
ಮಾರ್ಕನು 13 : 36 (KNV)
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.
ಮಾರ್ಕನು 13 : 37 (KNV)
ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
❮
❯