ಮಾರ್ಕನು 14 : 1 (KNV)
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಮಾರ್ಕನು 14 : 2 (KNV)
ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
ಮಾರ್ಕನು 14 : 3 (KNV)
ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
ಮಾರ್ಕನು 14 : 4 (KNV)
ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
ಮಾರ್ಕನು 14 : 5 (KNV)
ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
ಮಾರ್ಕನು 14 : 6 (KNV)
ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
ಮಾರ್ಕನು 14 : 7 (KNV)
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ಮಾರ್ಕನು 14 : 8 (KNV)
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
ಮಾರ್ಕನು 14 : 9 (KNV)
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
ಮಾರ್ಕನು 14 : 10 (KNV)
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
ಮಾರ್ಕನು 14 : 11 (KNV)
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
ಮಾರ್ಕನು 14 : 12 (KNV)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
ಮಾರ್ಕನು 14 : 13 (KNV)
ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
ಮಾರ್ಕನು 14 : 14 (KNV)
ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
ಮಾರ್ಕನು 14 : 15 (KNV)
ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
ಮಾರ್ಕನು 14 : 16 (KNV)
ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
ಮಾರ್ಕನು 14 : 17 (KNV)
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
ಮಾರ್ಕನು 14 : 18 (KNV)
ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಮಾರ್ಕನು 14 : 19 (KNV)
ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
ಮಾರ್ಕನು 14 : 20 (KNV)
ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
ಮಾರ್ಕನು 14 : 21 (KNV)
ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
ಮಾರ್ಕನು 14 : 22 (KNV)
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ಮಾರ್ಕನು 14 : 23 (KNV)
ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
ಮಾರ್ಕನು 14 : 24 (KNV)
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಮಾರ್ಕನು 14 : 25 (KNV)
ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಮಾರ್ಕನು 14 : 26 (KNV)
ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
ಮಾರ್ಕನು 14 : 27 (KNV)
ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
ಮಾರ್ಕನು 14 : 28 (KNV)
ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
ಮಾರ್ಕನು 14 : 29 (KNV)
ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
ಮಾರ್ಕನು 14 : 30 (KNV)
ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಮಾರ್ಕನು 14 : 31 (KNV)
ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
ಮಾರ್ಕನು 14 : 32 (KNV)
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
ಮಾರ್ಕನು 14 : 33 (KNV)
ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ಮಾರ್ಕನು 14 : 34 (KNV)
ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
ಮಾರ್ಕನು 14 : 35 (KNV)
ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
ಮಾರ್ಕನು 14 : 36 (KNV)
ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
ಮಾರ್ಕನು 14 : 37 (KNV)
ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
ಮಾರ್ಕನು 14 : 38 (KNV)
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
ಮಾರ್ಕನು 14 : 39 (KNV)
ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
ಮಾರ್ಕನು 14 : 40 (KNV)
ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
ಮಾರ್ಕನು 14 : 41 (KNV)
ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
ಮಾರ್ಕನು 14 : 42 (KNV)
ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
ಮಾರ್ಕನು 14 : 43 (KNV)
ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
ಮಾರ್ಕನು 14 : 44 (KNV)
ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
ಮಾರ್ಕನು 14 : 45 (KNV)
ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಮಾರ್ಕನು 14 : 46 (KNV)
ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
ಮಾರ್ಕನು 14 : 47 (KNV)
ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
ಮಾರ್ಕನು 14 : 48 (KNV)
ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
ಮಾರ್ಕನು 14 : 49 (KNV)
ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
ಮಾರ್ಕನು 14 : 50 (KNV)
ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಮಾರ್ಕನು 14 : 51 (KNV)
ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
ಮಾರ್ಕನು 14 : 52 (KNV)
ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
ಮಾರ್ಕನು 14 : 53 (KNV)
ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
ಮಾರ್ಕನು 14 : 54 (KNV)
ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
ಮಾರ್ಕನು 14 : 55 (KNV)
ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
ಮಾರ್ಕನು 14 : 56 (KNV)
ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
ಮಾರ್ಕನು 14 : 57 (KNV)
ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
ಮಾರ್ಕನು 14 : 58 (KNV)
ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
ಮಾರ್ಕನು 14 : 59 (KNV)
ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
ಮಾರ್ಕನು 14 : 60 (KNV)
ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
ಮಾರ್ಕನು 14 : 61 (KNV)
ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
ಮಾರ್ಕನು 14 : 62 (KNV)
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಮಾರ್ಕನು 14 : 63 (KNV)
ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
ಮಾರ್ಕನು 14 : 64 (KNV)
ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
ಮಾರ್ಕನು 14 : 65 (KNV)
ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
ಮಾರ್ಕನು 14 : 66 (KNV)
ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
ಮಾರ್ಕನು 14 : 67 (KNV)
ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
ಮಾರ್ಕನು 14 : 68 (KNV)
ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
ಮಾರ್ಕನು 14 : 69 (KNV)
ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
ಮಾರ್ಕನು 14 : 70 (KNV)
ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
ಮಾರ್ಕನು 14 : 71 (KNV)
ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
ಮಾರ್ಕನು 14 : 72 (KNV)
ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72

BG:

Opacity:

Color:


Size:


Font: