ಮಾರ್ಕನು 3 : 1 (KNV)
ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
ಮಾರ್ಕನು 3 : 2 (KNV)
ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
ಮಾರ್ಕನು 3 : 3 (KNV)
ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
ಮಾರ್ಕನು 3 : 4 (KNV)
ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
ಮಾರ್ಕನು 3 : 5 (KNV)
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಮಾರ್ಕನು 3 : 6 (KNV)
ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
ಮಾರ್ಕನು 3 : 7 (KNV)
ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
ಮಾರ್ಕನು 3 : 8 (KNV)
ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
ಮಾರ್ಕನು 3 : 9 (KNV)
ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
ಮಾರ್ಕನು 3 : 10 (KNV)
ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
ಮಾರ್ಕನು 3 : 11 (KNV)
ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
ಮಾರ್ಕನು 3 : 12 (KNV)
ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
ಮಾರ್ಕನು 3 : 13 (KNV)
ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
ಮಾರ್ಕನು 3 : 14 (KNV)
ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ಮಾರ್ಕನು 3 : 15 (KNV)
ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
ಮಾರ್ಕನು 3 : 16 (KNV)
ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
ಮಾರ್ಕನು 3 : 17 (KNV)
ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
ಮಾರ್ಕನು 3 : 18 (KNV)
ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
ಮಾರ್ಕನು 3 : 19 (KNV)
ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
ಮಾರ್ಕನು 3 : 20 (KNV)
ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
ಮಾರ್ಕನು 3 : 21 (KNV)
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ಮಾರ್ಕನು 3 : 22 (KNV)
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ಮಾರ್ಕನು 3 : 23 (KNV)
ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
ಮಾರ್ಕನು 3 : 24 (KNV)
ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
ಮಾರ್ಕನು 3 : 25 (KNV)
ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
ಮಾರ್ಕನು 3 : 26 (KNV)
ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
ಮಾರ್ಕನು 3 : 27 (KNV)
ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
ಮಾರ್ಕನು 3 : 28 (KNV)
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
ಮಾರ್ಕನು 3 : 29 (KNV)
ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
ಮಾರ್ಕನು 3 : 30 (KNV)
ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
ಮಾರ್ಕನು 3 : 31 (KNV)
ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
ಮಾರ್ಕನು 3 : 32 (KNV)
ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
ಮಾರ್ಕನು 3 : 33 (KNV)
ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
ಮಾರ್ಕನು 3 : 34 (KNV)
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
ಮಾರ್ಕನು 3 : 35 (KNV)
ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
❮
❯