ಮಾರ್ಕನು 6 : 1 (KNV)
ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ಮಾರ್ಕನು 6 : 2 (KNV)
ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
ಮಾರ್ಕನು 6 : 3 (KNV)
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಮಾರ್ಕನು 6 : 4 (KNV)
ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
ಮಾರ್ಕನು 6 : 5 (KNV)
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
ಮಾರ್ಕನು 6 : 6 (KNV)
ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
ಮಾರ್ಕನು 6 : 7 (KNV)
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ಮಾರ್ಕನು 6 : 8 (KNV)
ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
ಮಾರ್ಕನು 6 : 9 (KNV)
ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
ಮಾರ್ಕನು 6 : 10 (KNV)
ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
ಮಾರ್ಕನು 6 : 11 (KNV)
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಮಾರ್ಕನು 6 : 12 (KNV)
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
ಮಾರ್ಕನು 6 : 13 (KNV)
ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
ಮಾರ್ಕನು 6 : 14 (KNV)
ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
ಮಾರ್ಕನು 6 : 15 (KNV)
ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
ಮಾರ್ಕನು 6 : 16 (KNV)
ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
ಮಾರ್ಕನು 6 : 17 (KNV)
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ಮಾರ್ಕನು 6 : 18 (KNV)
ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
ಮಾರ್ಕನು 6 : 19 (KNV)
ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
ಮಾರ್ಕನು 6 : 20 (KNV)
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಮಾರ್ಕನು 6 : 21 (KNV)
ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
ಮಾರ್ಕನು 6 : 22 (KNV)
ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
ಮಾರ್ಕನು 6 : 23 (KNV)
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ಮಾರ್ಕನು 6 : 24 (KNV)
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
ಮಾರ್ಕನು 6 : 25 (KNV)
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
ಮಾರ್ಕನು 6 : 26 (KNV)
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
ಮಾರ್ಕನು 6 : 27 (KNV)
ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
ಮಾರ್ಕನು 6 : 28 (KNV)
ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
ಮಾರ್ಕನು 6 : 29 (KNV)
ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
ಮಾರ್ಕನು 6 : 30 (KNV)
ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
ಮಾರ್ಕನು 6 : 31 (KNV)
ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
ಮಾರ್ಕನು 6 : 32 (KNV)
ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
ಮಾರ್ಕನು 6 : 33 (KNV)
ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
ಮಾರ್ಕನು 6 : 34 (KNV)
ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
ಮಾರ್ಕನು 6 : 35 (KNV)
ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;
ಮಾರ್ಕನು 6 : 36 (KNV)
ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
ಮಾರ್ಕನು 6 : 37 (KNV)
ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
ಮಾರ್ಕನು 6 : 38 (KNV)
ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
ಮಾರ್ಕನು 6 : 39 (KNV)
ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
ಮಾರ್ಕನು 6 : 40 (KNV)
ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
ಮಾರ್ಕನು 6 : 41 (KNV)
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
ಮಾರ್ಕನು 6 : 42 (KNV)
ಅವರೆಲ್ಲರೂ ತಿಂದು ತೃಪ್ತರಾದರು.
ಮಾರ್ಕನು 6 : 43 (KNV)
ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
ಮಾರ್ಕನು 6 : 44 (KNV)
ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
ಮಾರ್ಕನು 6 : 45 (KNV)
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ಮಾರ್ಕನು 6 : 46 (KNV)
ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
ಮಾರ್ಕನು 6 : 47 (KNV)
ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
ಮಾರ್ಕನು 6 : 48 (KNV)
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
ಮಾರ್ಕನು 6 : 49 (KNV)
ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
ಮಾರ್ಕನು 6 : 50 (KNV)
ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
ಮಾರ್ಕನು 6 : 51 (KNV)
ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
ಮಾರ್ಕನು 6 : 52 (KNV)
ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
ಮಾರ್ಕನು 6 : 53 (KNV)
ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
ಮಾರ್ಕನು 6 : 54 (KNV)
ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ
ಮಾರ್ಕನು 6 : 55 (KNV)
ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.
ಮಾರ್ಕನು 6 : 56 (KNV)
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
❮
❯