ಮಾರ್ಕನು 9 : 1 (KNV)
ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಮಾರ್ಕನು 9 : 2 (KNV)
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ಮಾರ್ಕನು 9 : 3 (KNV)
ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
ಮಾರ್ಕನು 9 : 4 (KNV)
ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
ಮಾರ್ಕನು 9 : 5 (KNV)
ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
ಮಾರ್ಕನು 9 : 6 (KNV)
ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
ಮಾರ್ಕನು 9 : 7 (KNV)
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ಮಾರ್ಕನು 9 : 8 (KNV)
ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
ಮಾರ್ಕನು 9 : 9 (KNV)
ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಮಾರ್ಕನು 9 : 10 (KNV)
ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
ಮಾರ್ಕನು 9 : 11 (KNV)
ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
ಮಾರ್ಕನು 9 : 12 (KNV)
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
ಮಾರ್ಕನು 9 : 13 (KNV)
ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
ಮಾರ್ಕನು 9 : 14 (KNV)
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
ಮಾರ್ಕನು 9 : 15 (KNV)
ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
ಮಾರ್ಕನು 9 : 16 (KNV)
ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
ಮಾರ್ಕನು 9 : 17 (KNV)
ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
ಮಾರ್ಕನು 9 : 18 (KNV)
ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
ಮಾರ್ಕನು 9 : 19 (KNV)
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಮಾರ್ಕನು 9 : 20 (KNV)
ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
ಮಾರ್ಕನು 9 : 21 (KNV)
ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
ಮಾರ್ಕನು 9 : 22 (KNV)
ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
ಮಾರ್ಕನು 9 : 23 (KNV)
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಮಾರ್ಕನು 9 : 24 (KNV)
ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
ಮಾರ್ಕನು 9 : 25 (KNV)
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ಮಾರ್ಕನು 9 : 26 (KNV)
ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
ಮಾರ್ಕನು 9 : 27 (KNV)
ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
ಮಾರ್ಕನು 9 : 28 (KNV)
ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
ಮಾರ್ಕನು 9 : 29 (KNV)
ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
ಮಾರ್ಕನು 9 : 30 (KNV)
ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
ಮಾರ್ಕನು 9 : 31 (KNV)
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಮಾರ್ಕನು 9 : 32 (KNV)
ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
ಮಾರ್ಕನು 9 : 33 (KNV)
ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
ಮಾರ್ಕನು 9 : 34 (KNV)
ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
ಮಾರ್ಕನು 9 : 35 (KNV)
ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
ಮಾರ್ಕನು 9 : 36 (KNV)
ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
ಮಾರ್ಕನು 9 : 37 (KNV)
ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
ಮಾರ್ಕನು 9 : 38 (KNV)
ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
ಮಾರ್ಕನು 9 : 39 (KNV)
ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
ಮಾರ್ಕನು 9 : 40 (KNV)
ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
ಮಾರ್ಕನು 9 : 41 (KNV)
ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮಾರ್ಕನು 9 : 42 (KNV)
ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
ಮಾರ್ಕನು 9 : 43 (KNV)
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಮಾರ್ಕನು 9 : 44 (KNV)
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಮಾರ್ಕನು 9 : 45 (KNV)
ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
ಮಾರ್ಕನು 9 : 46 (KNV)
ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಮಾರ್ಕನು 9 : 47 (KNV)
ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
ಮಾರ್ಕನು 9 : 48 (KNV)
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಮಾರ್ಕನು 9 : 49 (KNV)
ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ಮಾರ್ಕನು 9 : 50 (KNV)
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50

BG:

Opacity:

Color:


Size:


Font: