ಲೂಕನು 10 : 1 (KNV)
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ಲೂಕನು 10 : 2 (KNV)
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ಲೂಕನು 10 : 3 (KNV)
ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
ಲೂಕನು 10 : 4 (KNV)
ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
ಲೂಕನು 10 : 5 (KNV)
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
ಲೂಕನು 10 : 6 (KNV)
ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
ಲೂಕನು 10 : 7 (KNV)
ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
ಲೂಕನು 10 : 8 (KNV)
ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
ಲೂಕನು 10 : 9 (KNV)
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
ಲೂಕನು 10 : 10 (KNV)
ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
ಲೂಕನು 10 : 11 (KNV)
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ಲೂಕನು 10 : 12 (KNV)
ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ಲೂಕನು 10 : 13 (KNV)
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
ಲೂಕನು 10 : 14 (KNV)
ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
ಲೂಕನು 10 : 15 (KNV)
ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
ಲೂಕನು 10 : 16 (KNV)
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಲೂಕನು 10 : 17 (KNV)
ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
ಲೂಕನು 10 : 18 (KNV)
ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
ಲೂಕನು 10 : 19 (KNV)
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ಲೂಕನು 10 : 20 (KNV)
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಲೂಕನು 10 : 21 (KNV)
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಲೂಕನು 10 : 22 (KNV)
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ಲೂಕನು 10 : 23 (KNV)
ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
ಲೂಕನು 10 : 24 (KNV)
ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 10 : 25 (KNV)
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಲೂಕನು 10 : 26 (KNV)
ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
ಲೂಕನು 10 : 27 (KNV)
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
ಲೂಕನು 10 : 28 (KNV)
ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
ಲೂಕನು 10 : 29 (KNV)
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ಲೂಕನು 10 : 30 (KNV)
ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
ಲೂಕನು 10 : 31 (KNV)
ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
ಲೂಕನು 10 : 32 (KNV)
ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
ಲೂಕನು 10 : 33 (KNV)
ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
ಲೂಕನು 10 : 34 (KNV)
ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
ಲೂಕನು 10 : 35 (KNV)
ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
ಲೂಕನು 10 : 36 (KNV)
ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
ಲೂಕನು 10 : 37 (KNV)
ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
ಲೂಕನು 10 : 38 (KNV)
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
ಲೂಕನು 10 : 39 (KNV)
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಲೂಕನು 10 : 40 (KNV)
ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
ಲೂಕನು 10 : 41 (KNV)
ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
ಲೂಕನು 10 : 42 (KNV)
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
❮
❯