ಲೂಕನು 11 : 1 (KNV)
ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
ಲೂಕನು 11 : 2 (KNV)
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ಲೂಕನು 11 : 3 (KNV)
ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
ಲೂಕನು 11 : 4 (KNV)
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
ಲೂಕನು 11 : 5 (KNV)
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಲೂಕನು 11 : 6 (KNV)
ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
ಲೂಕನು 11 : 7 (KNV)
ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
ಲೂಕನು 11 : 8 (KNV)
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ಲೂಕನು 11 : 9 (KNV)
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
ಲೂಕನು 11 : 10 (KNV)
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
ಲೂಕನು 11 : 11 (KNV)
ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
ಲೂಕನು 11 : 12 (KNV)
ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
ಲೂಕನು 11 : 13 (KNV)
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ಲೂಕನು 11 : 14 (KNV)
ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
ಲೂಕನು 11 : 15 (KNV)
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ಲೂಕನು 11 : 16 (KNV)
ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
ಲೂಕನು 11 : 17 (KNV)
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
ಲೂಕನು 11 : 18 (KNV)
ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
ಲೂಕನು 11 : 19 (KNV)
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
ಲೂಕನು 11 : 20 (KNV)
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ಲೂಕನು 11 : 21 (KNV)
ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
ಲೂಕನು 11 : 22 (KNV)
ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
ಲೂಕನು 11 : 23 (KNV)
ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
ಲೂಕನು 11 : 24 (KNV)
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ಲೂಕನು 11 : 25 (KNV)
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
ಲೂಕನು 11 : 26 (KNV)
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
ಲೂಕನು 11 : 27 (KNV)
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
ಲೂಕನು 11 : 28 (KNV)
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಲೂಕನು 11 : 29 (KNV)
ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
ಲೂಕನು 11 : 30 (KNV)
ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
ಲೂಕನು 11 : 31 (KNV)
ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
ಲೂಕನು 11 : 32 (KNV)
ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ಲೂಕನು 11 : 33 (KNV)
ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
ಲೂಕನು 11 : 34 (KNV)
ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
ಲೂಕನು 11 : 35 (KNV)
ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
ಲೂಕನು 11 : 36 (KNV)
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
ಲೂಕನು 11 : 37 (KNV)
ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
ಲೂಕನು 11 : 38 (KNV)
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
ಲೂಕನು 11 : 39 (KNV)
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ಲೂಕನು 11 : 40 (KNV)
ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
ಲೂಕನು 11 : 41 (KNV)
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಲೂಕನು 11 : 42 (KNV)
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ಲೂಕನು 11 : 43 (KNV)
ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
ಲೂಕನು 11 : 44 (KNV)
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
ಲೂಕನು 11 : 45 (KNV)
ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
ಲೂಕನು 11 : 46 (KNV)
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
ಲೂಕನು 11 : 47 (KNV)
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಲೂಕನು 11 : 48 (KNV)
ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಲೂಕನು 11 : 49 (KNV)
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಲೂಕನು 11 : 50 (KNV)
ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
ಲೂಕನು 11 : 51 (KNV)
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಲೂಕನು 11 : 52 (KNV)
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಲೂಕನು 11 : 53 (KNV)
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
ಲೂಕನು 11 : 54 (KNV)
ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
❮
❯