ಲೂಕನು 15 : 1 (KNV)
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
ಲೂಕನು 15 : 2 (KNV)
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ಲೂಕನು 15 : 3 (KNV)
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಲೂಕನು 15 : 4 (KNV)
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ಲೂಕನು 15 : 5 (KNV)
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ಲೂಕನು 15 : 6 (KNV)
ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
ಲೂಕನು 15 : 7 (KNV)
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 15 : 8 (KNV)
ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
ಲೂಕನು 15 : 9 (KNV)
ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
ಲೂಕನು 15 : 10 (KNV)
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 15 : 11 (KNV)
ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
ಲೂಕನು 15 : 12 (KNV)
ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
ಲೂಕನು 15 : 13 (KNV)
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
ಲೂಕನು 15 : 14 (KNV)
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
ಲೂಕನು 15 : 15 (KNV)
ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
ಲೂಕನು 15 : 16 (KNV)
ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
ಲೂಕನು 15 : 17 (KNV)
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಲೂಕನು 15 : 18 (KNV)
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಲೂಕನು 15 : 19 (KNV)
ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
ಲೂಕನು 15 : 20 (KNV)
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಲೂಕನು 15 : 21 (KNV)
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
ಲೂಕನು 15 : 22 (KNV)
ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
ಲೂಕನು 15 : 23 (KNV)
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
ಲೂಕನು 15 : 24 (KNV)
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
ಲೂಕನು 15 : 25 (KNV)
ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
ಲೂಕನು 15 : 26 (KNV)
ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
ಲೂಕನು 15 : 27 (KNV)
ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
ಲೂಕನು 15 : 28 (KNV)
ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
ಲೂಕನು 15 : 29 (KNV)
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
ಲೂಕನು 15 : 30 (KNV)
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
ಲೂಕನು 15 : 31 (KNV)
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
ಲೂಕನು 15 : 32 (KNV)
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
❮
❯