ಲೂಕನು 16 : 1 (KNV)
ತರುವಾಯ ಆತನು ತನ್ನ ಶಿಷ್ಯರಿಗೂ?
ಲೂಕನು 16 : 2 (KNV)
ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
ಲೂಕನು 16 : 3 (KNV)
ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
ಲೂಕನು 16 : 4 (KNV)
ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
ಲೂಕನು 16 : 5 (KNV)
ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
ಲೂಕನು 16 : 6 (KNV)
ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
ಲೂಕನು 16 : 7 (KNV)
ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
ಲೂಕನು 16 : 8 (KNV)
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
ಲೂಕನು 16 : 9 (KNV)
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಲೂಕನು 16 : 10 (KNV)
ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
ಲೂಕನು 16 : 11 (KNV)
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
ಲೂಕನು 16 : 12 (KNV)
ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
ಲೂಕನು 16 : 13 (KNV)
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ಲೂಕನು 16 : 14 (KNV)
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಲೂಕನು 16 : 15 (KNV)
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಲೂಕನು 16 : 16 (KNV)
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
ಲೂಕನು 16 : 17 (KNV)
ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
ಲೂಕನು 16 : 18 (KNV)
ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
ಲೂಕನು 16 : 19 (KNV)
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಲೂಕನು 16 : 20 (KNV)
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
ಲೂಕನು 16 : 21 (KNV)
ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
ಲೂಕನು 16 : 22 (KNV)
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಲೂಕನು 16 : 23 (KNV)
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ಲೂಕನು 16 : 24 (KNV)
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಲೂಕನು 16 : 25 (KNV)
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ಲೂಕನು 16 : 26 (KNV)
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
ಲೂಕನು 16 : 27 (KNV)
ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಲೂಕನು 16 : 28 (KNV)
ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
ಲೂಕನು 16 : 29 (KNV)
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
ಲೂಕನು 16 : 30 (KNV)
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
ಲೂಕನು 16 : 31 (KNV)
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
❮
❯