ಲೂಕನು 2 : 1 (KNV)
ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ಲೂಕನು 2 : 2 (KNV)
ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
ಲೂಕನು 2 : 3 (KNV)
ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
ಲೂಕನು 2 : 4 (KNV)
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಲೂಕನು 2 : 5 (KNV)
ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
ಲೂಕನು 2 : 6 (KNV)
ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
ಲೂಕನು 2 : 7 (KNV)
ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
ಲೂಕನು 2 : 8 (KNV)
ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
ಲೂಕನು 2 : 9 (KNV)
ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
ಲೂಕನು 2 : 10 (KNV)
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಲೂಕನು 2 : 11 (KNV)
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಲೂಕನು 2 : 12 (KNV)
ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
ಲೂಕನು 2 : 13 (KNV)
ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ಲೂಕನು 2 : 14 (KNV)
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಲೂಕನು 2 : 15 (KNV)
ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಲೂಕನು 2 : 16 (KNV)
ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
ಲೂಕನು 2 : 17 (KNV)
ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
ಲೂಕನು 2 : 18 (KNV)
ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಲೂಕನು 2 : 19 (KNV)
ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
ಲೂಕನು 2 : 20 (KNV)
ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
ಲೂಕನು 2 : 21 (KNV)
ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
ಲೂಕನು 2 : 22 (KNV)
ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
ಲೂಕನು 2 : 23 (KNV)
(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
ಲೂಕನು 2 : 24 (KNV)
ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
ಲೂಕನು 2 : 25 (KNV)
ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ಲೂಕನು 2 : 26 (KNV)
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ಲೂಕನು 2 : 27 (KNV)
ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
ಲೂಕನು 2 : 28 (KNV)
ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
ಲೂಕನು 2 : 29 (KNV)
ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
ಲೂಕನು 2 : 30 (KNV)
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಲೂಕನು 2 : 31 (KNV)
ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
ಲೂಕನು 2 : 32 (KNV)
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಲೂಕನು 2 : 33 (KNV)
ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
ಲೂಕನು 2 : 34 (KNV)
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಲೂಕನು 2 : 35 (KNV)
ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
ಲೂಕನು 2 : 36 (KNV)
ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
ಲೂಕನು 2 : 37 (KNV)
ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
ಲೂಕನು 2 : 38 (KNV)
ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ಲೂಕನು 2 : 39 (KNV)
ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
ಲೂಕನು 2 : 40 (KNV)
ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
ಲೂಕನು 2 : 41 (KNV)
ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
ಲೂಕನು 2 : 42 (KNV)
ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
ಲೂಕನು 2 : 43 (KNV)
ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
ಲೂಕನು 2 : 44 (KNV)
ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
ಲೂಕನು 2 : 45 (KNV)
ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
ಲೂಕನು 2 : 46 (KNV)
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಲೂಕನು 2 : 47 (KNV)
ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
ಲೂಕನು 2 : 48 (KNV)
ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
ಲೂಕನು 2 : 49 (KNV)
ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
ಲೂಕನು 2 : 50 (KNV)
ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
ಲೂಕನು 2 : 51 (KNV)
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಲೂಕನು 2 : 52 (KNV)
ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52

BG:

Opacity:

Color:


Size:


Font: