ಲೂಕನು 22 : 1 (KNV)
ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
ಲೂಕನು 22 : 2 (KNV)
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಲೂಕನು 22 : 3 (KNV)
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
ಲೂಕನು 22 : 4 (KNV)
ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
ಲೂಕನು 22 : 5 (KNV)
ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
ಲೂಕನು 22 : 6 (KNV)
ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
ಲೂಕನು 22 : 7 (KNV)
ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
ಲೂಕನು 22 : 8 (KNV)
ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
ಲೂಕನು 22 : 9 (KNV)
ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
ಲೂಕನು 22 : 10 (KNV)
ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
ಲೂಕನು 22 : 11 (KNV)
ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
ಲೂಕನು 22 : 12 (KNV)
ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
ಲೂಕನು 22 : 13 (KNV)
ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
ಲೂಕನು 22 : 14 (KNV)
ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
ಲೂಕನು 22 : 15 (KNV)
ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
ಲೂಕನು 22 : 16 (KNV)
ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 22 : 17 (KNV)
ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
ಲೂಕನು 22 : 18 (KNV)
ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
ಲೂಕನು 22 : 19 (KNV)
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
ಲೂಕನು 22 : 20 (KNV)
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
ಲೂಕನು 22 : 21 (KNV)
ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
ಲೂಕನು 22 : 22 (KNV)
ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ಲೂಕನು 22 : 23 (KNV)
ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
ಲೂಕನು 22 : 24 (KNV)
ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
ಲೂಕನು 22 : 25 (KNV)
ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
ಲೂಕನು 22 : 26 (KNV)
ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
ಲೂಕನು 22 : 27 (KNV)
ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
ಲೂಕನು 22 : 28 (KNV)
ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
ಲೂಕನು 22 : 29 (KNV)
ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
ಲೂಕನು 22 : 30 (KNV)
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಲೂಕನು 22 : 31 (KNV)
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ಲೂಕನು 22 : 32 (KNV)
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ಲೂಕನು 22 : 33 (KNV)
ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
ಲೂಕನು 22 : 34 (KNV)
ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
ಲೂಕನು 22 : 35 (KNV)
ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
ಲೂಕನು 22 : 36 (KNV)
ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
ಲೂಕನು 22 : 37 (KNV)
ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 22 : 38 (KNV)
ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
ಲೂಕನು 22 : 39 (KNV)
ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
ಲೂಕನು 22 : 40 (KNV)
ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
ಲೂಕನು 22 : 41 (KNV)
ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
ಲೂಕನು 22 : 42 (KNV)
ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
ಲೂಕನು 22 : 43 (KNV)
ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
ಲೂಕನು 22 : 44 (KNV)
ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ಲೂಕನು 22 : 45 (KNV)
ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
ಲೂಕನು 22 : 46 (KNV)
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ಲೂಕನು 22 : 47 (KNV)
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
ಲೂಕನು 22 : 48 (KNV)
ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
ಲೂಕನು 22 : 49 (KNV)
ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
ಲೂಕನು 22 : 50 (KNV)
ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
ಲೂಕನು 22 : 51 (KNV)
ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
ಲೂಕನು 22 : 52 (KNV)
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
ಲೂಕನು 22 : 53 (KNV)
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಲೂಕನು 22 : 54 (KNV)
ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
ಲೂಕನು 22 : 55 (KNV)
ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
ಲೂಕನು 22 : 56 (KNV)
ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
ಲೂಕನು 22 : 57 (KNV)
ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
ಲೂಕನು 22 : 58 (KNV)
ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
ಲೂಕನು 22 : 59 (KNV)
ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
ಲೂಕನು 22 : 60 (KNV)
ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
ಲೂಕನು 22 : 61 (KNV)
ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
ಲೂಕನು 22 : 62 (KNV)
ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
ಲೂಕನು 22 : 63 (KNV)
ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
ಲೂಕನು 22 : 64 (KNV)
ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
ಲೂಕನು 22 : 65 (KNV)
ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
ಲೂಕನು 22 : 66 (KNV)
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ಲೂಕನು 22 : 67 (KNV)
ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
ಲೂಕನು 22 : 68 (KNV)
ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
ಲೂಕನು 22 : 69 (KNV)
ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
ಲೂಕನು 22 : 70 (KNV)
ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
ಲೂಕನು 22 : 71 (KNV)
ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
❮
❯