ಲೂಕನು 8 : 1 (KNV)
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
ಲೂಕನು 8 : 2 (KNV)
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ಲೂಕನು 8 : 3 (KNV)
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
ಲೂಕನು 8 : 4 (KNV)
ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
ಲೂಕನು 8 : 5 (KNV)
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ಲೂಕನು 8 : 6 (KNV)
ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
ಲೂಕನು 8 : 7 (KNV)
ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಲೂಕನು 8 : 8 (KNV)
ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
ಲೂಕನು 8 : 9 (KNV)
ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
ಲೂಕನು 8 : 10 (KNV)
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
ಲೂಕನು 8 : 11 (KNV)
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಲೂಕನು 8 : 12 (KNV)
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
ಲೂಕನು 8 : 13 (KNV)
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಲೂಕನು 8 : 14 (KNV)
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ಲೂಕನು 8 : 15 (KNV)
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ಲೂಕನು 8 : 16 (KNV)
ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ಲೂಕನು 8 : 17 (KNV)
ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
ಲೂಕನು 8 : 18 (KNV)
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ಲೂಕನು 8 : 19 (KNV)
ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
ಲೂಕನು 8 : 20 (KNV)
ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
ಲೂಕನು 8 : 21 (KNV)
ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
ಲೂಕನು 8 : 22 (KNV)
ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
ಲೂಕನು 8 : 23 (KNV)
ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
ಲೂಕನು 8 : 24 (KNV)
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ಲೂಕನು 8 : 25 (KNV)
ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ಲೂಕನು 8 : 26 (KNV)
ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
ಲೂಕನು 8 : 27 (KNV)
ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ಲೂಕನು 8 : 28 (KNV)
ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
ಲೂಕನು 8 : 29 (KNV)
(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
ಲೂಕನು 8 : 30 (KNV)
ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
ಲೂಕನು 8 : 31 (KNV)
ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
ಲೂಕನು 8 : 32 (KNV)
ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
ಲೂಕನು 8 : 33 (KNV)
ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
ಲೂಕನು 8 : 34 (KNV)
ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
ಲೂಕನು 8 : 35 (KNV)
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ಲೂಕನು 8 : 36 (KNV)
ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
ಲೂಕನು 8 : 37 (KNV)
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ಲೂಕನು 8 : 38 (KNV)
ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
ಲೂಕನು 8 : 39 (KNV)
ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
ಲೂಕನು 8 : 40 (KNV)
ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
ಲೂಕನು 8 : 41 (KNV)
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ಲೂಕನು 8 : 42 (KNV)
ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
ಲೂಕನು 8 : 43 (KNV)
ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
ಲೂಕನು 8 : 44 (KNV)
ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
ಲೂಕನು 8 : 45 (KNV)
ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
ಲೂಕನು 8 : 46 (KNV)
ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
ಲೂಕನು 8 : 47 (KNV)
ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
ಲೂಕನು 8 : 48 (KNV)
ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
ಲೂಕನು 8 : 49 (KNV)
ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
ಲೂಕನು 8 : 50 (KNV)
ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
ಲೂಕನು 8 : 51 (KNV)
ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
ಲೂಕನು 8 : 52 (KNV)
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
ಲೂಕನು 8 : 53 (KNV)
ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
ಲೂಕನು 8 : 54 (KNV)
ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
ಲೂಕನು 8 : 55 (KNV)
ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಲೂಕನು 8 : 56 (KNV)
ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56

BG:

Opacity:

Color:


Size:


Font: