ಯೋಹಾನನು 12 : 1 (KNV)
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
ಯೋಹಾನನು 12 : 2 (KNV)
ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
ಯೋಹಾನನು 12 : 3 (KNV)
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
ಯೋಹಾನನು 12 : 4 (KNV)
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
ಯೋಹಾನನು 12 : 5 (KNV)
ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
ಯೋಹಾನನು 12 : 6 (KNV)
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ಯೋಹಾನನು 12 : 7 (KNV)
ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
ಯೋಹಾನನು 12 : 8 (KNV)
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
ಯೋಹಾನನು 12 : 9 (KNV)
ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
ಯೋಹಾನನು 12 : 10 (KNV)
ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಯೋಹಾನನು 12 : 11 (KNV)
ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
ಯೋಹಾನನು 12 : 12 (KNV)
ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
ಯೋಹಾನನು 12 : 13 (KNV)
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
ಯೋಹಾನನು 12 : 14 (KNV)
ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
ಯೋಹಾನನು 12 : 15 (KNV)
ಹೀಗೆ--ಚೀಯೋನ್‌ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
ಯೋಹಾನನು 12 : 16 (KNV)
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಯೋಹಾನನು 12 : 17 (KNV)
ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
ಯೋಹಾನನು 12 : 18 (KNV)
ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
ಯೋಹಾನನು 12 : 19 (KNV)
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ಯೋಹಾನನು 12 : 20 (KNV)
ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ಯೋಹಾನನು 12 : 21 (KNV)
ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
ಯೋಹಾನನು 12 : 22 (KNV)
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
ಯೋಹಾನನು 12 : 23 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಯೋಹಾನನು 12 : 24 (KNV)
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ಯೋಹಾನನು 12 : 25 (KNV)
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ಯೋಹಾನನು 12 : 26 (KNV)
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಯೋಹಾನನು 12 : 27 (KNV)
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಯೋಹಾನನು 12 : 28 (KNV)
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಯೋಹಾನನು 12 : 29 (KNV)
ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
ಯೋಹಾನನು 12 : 30 (KNV)
ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
ಯೋಹಾನನು 12 : 31 (KNV)
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ಯೋಹಾನನು 12 : 32 (KNV)
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಯೋಹಾನನು 12 : 33 (KNV)
ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
ಯೋಹಾನನು 12 : 34 (KNV)
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
ಯೋಹಾನನು 12 : 35 (KNV)
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಯೋಹಾನನು 12 : 36 (KNV)
ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
ಯೋಹಾನನು 12 : 37 (KNV)
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ಯೋಹಾನನು 12 : 38 (KNV)
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ಯೋಹಾನನು 12 : 39 (KNV)
ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
ಯೋಹಾನನು 12 : 40 (KNV)
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ಯೋಹಾನನು 12 : 41 (KNV)
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ಯೋಹಾನನು 12 : 42 (KNV)
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ಯೋಹಾನನು 12 : 43 (KNV)
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ಯೋಹಾನನು 12 : 44 (KNV)
ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
ಯೋಹಾನನು 12 : 45 (KNV)
ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
ಯೋಹಾನನು 12 : 46 (KNV)
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಯೋಹಾನನು 12 : 47 (KNV)
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
ಯೋಹಾನನು 12 : 48 (KNV)
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
ಯೋಹಾನನು 12 : 49 (KNV)
ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ಯೋಹಾನನು 12 : 50 (KNV)
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50

BG:

Opacity:

Color:


Size:


Font: