ಯೋಹಾನನು 16 : 1 (KNV)
ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
ಯೋಹಾನನು 16 : 2 (KNV)
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಯೋಹಾನನು 16 : 3 (KNV)
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಯೋಹಾನನು 16 : 4 (KNV)
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಯೋಹಾನನು 16 : 5 (KNV)
ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
ಯೋಹಾನನು 16 : 6 (KNV)
ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
ಯೋಹಾನನು 16 : 7 (KNV)
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಯೋಹಾನನು 16 : 8 (KNV)
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ಯೋಹಾನನು 16 : 9 (KNV)
ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
ಯೋಹಾನನು 16 : 10 (KNV)
ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
ಯೋಹಾನನು 16 : 11 (KNV)
ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
ಯೋಹಾನನು 16 : 12 (KNV)
ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
ಯೋಹಾನನು 16 : 13 (KNV)
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಯೋಹಾನನು 16 : 14 (KNV)
ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
ಯೋಹಾನನು 16 : 15 (KNV)
ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
ಯೋಹಾನನು 16 : 16 (KNV)
ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಯೋಹಾನನು 16 : 17 (KNV)
ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
ಯೋಹಾನನು 16 : 18 (KNV)
ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
ಯೋಹಾನನು 16 : 19 (KNV)
ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
ಯೋಹಾನನು 16 : 20 (KNV)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಯೋಹಾನನು 16 : 21 (KNV)
ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
ಯೋಹಾನನು 16 : 22 (KNV)
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ಯೋಹಾನನು 16 : 23 (KNV)
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ಯೋಹಾನನು 16 : 24 (KNV)
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಯೋಹಾನನು 16 : 25 (KNV)
ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
ಯೋಹಾನನು 16 : 26 (KNV)
ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
ಯೋಹಾನನು 16 : 27 (KNV)
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
ಯೋಹಾನನು 16 : 28 (KNV)
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಯೋಹಾನನು 16 : 29 (KNV)
ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
ಯೋಹಾನನು 16 : 30 (KNV)
ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
ಯೋಹಾನನು 16 : 31 (KNV)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
ಯೋಹಾನನು 16 : 32 (KNV)
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಯೋಹಾನನು 16 : 33 (KNV)
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: