ಯೋಹಾನನು 19 : 1 (KNV)
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
ಯೋಹಾನನು 19 : 2 (KNV)
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
ಯೋಹಾನನು 19 : 3 (KNV)
ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
ಯೋಹಾನನು 19 : 4 (KNV)
ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ಯೋಹಾನನು 19 : 5 (KNV)
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ಯೋಹಾನನು 19 : 6 (KNV)
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
ಯೋಹಾನನು 19 : 7 (KNV)
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ಯೋಹಾನನು 19 : 8 (KNV)
ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
ಯೋಹಾನನು 19 : 9 (KNV)
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
ಯೋಹಾನನು 19 : 10 (KNV)
ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
ಯೋಹಾನನು 19 : 11 (KNV)
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಯೋಹಾನನು 19 : 12 (KNV)
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ಯೋಹಾನನು 19 : 13 (KNV)
ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
ಯೋಹಾನನು 19 : 14 (KNV)
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ಯೋಹಾನನು 19 : 15 (KNV)
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಯೋಹಾನನು 19 : 16 (KNV)
ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
ಯೋಹಾನನು 19 : 17 (KNV)
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ಯೋಹಾನನು 19 : 18 (KNV)
ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
ಯೋಹಾನನು 19 : 19 (KNV)
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ಯೋಹಾನನು 19 : 20 (KNV)
ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
ಯೋಹಾನನು 19 : 21 (KNV)
ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
ಯೋಹಾನನು 19 : 22 (KNV)
ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
ಯೋಹಾನನು 19 : 23 (KNV)
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
ಯೋಹಾನನು 19 : 24 (KNV)
ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
ಯೋಹಾನನು 19 : 25 (KNV)
ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
ಯೋಹಾನನು 19 : 26 (KNV)
ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
ಯೋಹಾನನು 19 : 27 (KNV)
ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
ಯೋಹಾನನು 19 : 28 (KNV)
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಯೋಹಾನನು 19 : 29 (KNV)
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
ಯೋಹಾನನು 19 : 30 (KNV)
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಯೋಹಾನನು 19 : 31 (KNV)
ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
ಯೋಹಾನನು 19 : 32 (KNV)
ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
ಯೋಹಾನನು 19 : 33 (KNV)
ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
ಯೋಹಾನನು 19 : 34 (KNV)
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
ಯೋಹಾನನು 19 : 35 (KNV)
ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
ಯೋಹಾನನು 19 : 36 (KNV)
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
ಯೋಹಾನನು 19 : 37 (KNV)
ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
ಯೋಹಾನನು 19 : 38 (KNV)
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಯೋಹಾನನು 19 : 39 (KNV)
ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
ಯೋಹಾನನು 19 : 40 (KNV)
ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
ಯೋಹಾನನು 19 : 41 (KNV)
ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.
ಯೋಹಾನನು 19 : 42 (KNV)
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42