ಯೋಹಾನನು 5 : 1 (KNV)
ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
ಯೋಹಾನನು 5 : 2 (KNV)
ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
ಯೋಹಾನನು 5 : 3 (KNV)
ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
ಯೋಹಾನನು 5 : 4 (KNV)
ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
ಯೋಹಾನನು 5 : 5 (KNV)
ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
ಯೋಹಾನನು 5 : 6 (KNV)
ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
ಯೋಹಾನನು 5 : 7 (KNV)
ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
ಯೋಹಾನನು 5 : 8 (KNV)
ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
ಯೋಹಾನನು 5 : 9 (KNV)
ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
ಯೋಹಾನನು 5 : 10 (KNV)
ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
ಯೋಹಾನನು 5 : 11 (KNV)
ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
ಯೋಹಾನನು 5 : 12 (KNV)
ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
ಯೋಹಾನನು 5 : 13 (KNV)
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
ಯೋಹಾನನು 5 : 14 (KNV)
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ಯೋಹಾನನು 5 : 15 (KNV)
ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
ಯೋಹಾನನು 5 : 16 (KNV)
ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
ಯೋಹಾನನು 5 : 17 (KNV)
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಯೋಹಾನನು 5 : 18 (KNV)
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ಯೋಹಾನನು 5 : 19 (KNV)
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
ಯೋಹಾನನು 5 : 20 (KNV)
ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
ಯೋಹಾನನು 5 : 21 (KNV)
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ಯೋಹಾನನು 5 : 22 (KNV)
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಯೋಹಾನನು 5 : 23 (KNV)
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಯೋಹಾನನು 5 : 24 (KNV)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಯೋಹಾನನು 5 : 25 (KNV)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಯೋಹಾನನು 5 : 26 (KNV)
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ಯೋಹಾನನು 5 : 27 (KNV)
ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
ಯೋಹಾನನು 5 : 28 (KNV)
ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
ಯೋಹಾನನು 5 : 29 (KNV)
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ಯೋಹಾನನು 5 : 30 (KNV)
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ಯೋಹಾನನು 5 : 31 (KNV)
ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
ಯೋಹಾನನು 5 : 32 (KNV)
ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
ಯೋಹಾನನು 5 : 33 (KNV)
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ಯೋಹಾನನು 5 : 34 (KNV)
ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
ಯೋಹಾನನು 5 : 35 (KNV)
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಯೋಹಾನನು 5 : 36 (KNV)
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಯೋಹಾನನು 5 : 37 (KNV)
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
ಯೋಹಾನನು 5 : 38 (KNV)
ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
ಯೋಹಾನನು 5 : 39 (KNV)
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಯೋಹಾನನು 5 : 40 (KNV)
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ಯೋಹಾನನು 5 : 41 (KNV)
ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
ಯೋಹಾನನು 5 : 42 (KNV)
ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
ಯೋಹಾನನು 5 : 43 (KNV)
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
ಯೋಹಾನನು 5 : 44 (KNV)
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯೋಹಾನನು 5 : 45 (KNV)
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಯೋಹಾನನು 5 : 46 (KNV)
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
ಯೋಹಾನನು 5 : 47 (KNV)
ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47

BG:

Opacity:

Color:


Size:


Font: