ಯೋಹಾನನು 8 : 1 (KNV)
ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
ಯೋಹಾನನು 8 : 2 (KNV)
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ಯೋಹಾನನು 8 : 3 (KNV)
ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
ಯೋಹಾನನು 8 : 4 (KNV)
ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
ಯೋಹಾನನು 8 : 5 (KNV)
ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
ಯೋಹಾನನು 8 : 6 (KNV)
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
ಯೋಹಾನನು 8 : 7 (KNV)
ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
ಯೋಹಾನನು 8 : 8 (KNV)
ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
ಯೋಹಾನನು 8 : 9 (KNV)
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ಯೋಹಾನನು 8 : 10 (KNV)
ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
ಯೋಹಾನನು 8 : 11 (KNV)
ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
ಯೋಹಾನನು 8 : 12 (KNV)
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಯೋಹಾನನು 8 : 13 (KNV)
ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
ಯೋಹಾನನು 8 : 14 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
ಯೋಹಾನನು 8 : 15 (KNV)
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಯೋಹಾನನು 8 : 16 (KNV)
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
ಯೋಹಾನನು 8 : 17 (KNV)
ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
ಯೋಹಾನನು 8 : 18 (KNV)
ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
ಯೋಹಾನನು 8 : 19 (KNV)
ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
ಯೋಹಾನನು 8 : 20 (KNV)
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
ಯೋಹಾನನು 8 : 21 (KNV)
ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ಯೋಹಾನನು 8 : 22 (KNV)
ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
ಯೋಹಾನನು 8 : 23 (KNV)
ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
ಯೋಹಾನನು 8 : 24 (KNV)
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಯೋಹಾನನು 8 : 25 (KNV)
ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
ಯೋಹಾನನು 8 : 26 (KNV)
ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
ಯೋಹಾನನು 8 : 27 (KNV)
ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
ಯೋಹಾನನು 8 : 28 (KNV)
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
ಯೋಹಾನನು 8 : 29 (KNV)
ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
ಯೋಹಾನನು 8 : 30 (KNV)
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
ಯೋಹಾನನು 8 : 31 (KNV)
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಯೋಹಾನನು 8 : 32 (KNV)
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
ಯೋಹಾನನು 8 : 33 (KNV)
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಯೋಹಾನನು 8 : 34 (KNV)
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
ಯೋಹಾನನು 8 : 35 (KNV)
ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
ಯೋಹಾನನು 8 : 36 (KNV)
ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
ಯೋಹಾನನು 8 : 37 (KNV)
ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ಯೋಹಾನನು 8 : 38 (KNV)
ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
ಯೋಹಾನನು 8 : 39 (KNV)
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ಯೋಹಾನನು 8 : 40 (KNV)
ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
ಯೋಹಾನನು 8 : 41 (KNV)
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ಯೋಹಾನನು 8 : 42 (KNV)
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ಯೋಹಾನನು 8 : 43 (KNV)
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ಯೋಹಾನನು 8 : 44 (KNV)
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಯೋಹಾನನು 8 : 45 (KNV)
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
ಯೋಹಾನನು 8 : 46 (KNV)
ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
ಯೋಹಾನನು 8 : 47 (KNV)
ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
ಯೋಹಾನನು 8 : 48 (KNV)
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಯೋಹಾನನು 8 : 49 (KNV)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
ಯೋಹಾನನು 8 : 50 (KNV)
ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
ಯೋಹಾನನು 8 : 51 (KNV)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
ಯೋಹಾನನು 8 : 52 (KNV)
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಯೋಹಾನನು 8 : 53 (KNV)
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಯೋಹಾನನು 8 : 54 (KNV)
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಯೋಹಾನನು 8 : 55 (KNV)
ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
ಯೋಹಾನನು 8 : 56 (KNV)
ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
ಯೋಹಾನನು 8 : 57 (KNV)
ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
ಯೋಹಾನನು 8 : 58 (KNV)
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಯೋಹಾನನು 8 : 59 (KNV)
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59

BG:

Opacity:

Color:


Size:


Font: