ಯೋಹಾನನು 9 : 1 (KNV)
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ಯೋಹಾನನು 9 : 2 (KNV)
ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
ಯೋಹಾನನು 9 : 3 (KNV)
ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
ಯೋಹಾನನು 9 : 4 (KNV)
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ಯೋಹಾನನು 9 : 5 (KNV)
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
ಯೋಹಾನನು 9 : 6 (KNV)
ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
ಯೋಹಾನನು 9 : 7 (KNV)
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ಯೋಹಾನನು 9 : 8 (KNV)
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ಯೋಹಾನನು 9 : 9 (KNV)
ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
ಯೋಹಾನನು 9 : 10 (KNV)
ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
ಯೋಹಾನನು 9 : 11 (KNV)
ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
ಯೋಹಾನನು 9 : 12 (KNV)
ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
ಯೋಹಾನನು 9 : 13 (KNV)
ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
ಯೋಹಾನನು 9 : 14 (KNV)
ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
ಯೋಹಾನನು 9 : 15 (KNV)
ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
ಯೋಹಾನನು 9 : 16 (KNV)
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಯೋಹಾನನು 9 : 17 (KNV)
ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
ಯೋಹಾನನು 9 : 18 (KNV)
ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
ಯೋಹಾನನು 9 : 19 (KNV)
ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
ಯೋಹಾನನು 9 : 20 (KNV)
ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
ಯೋಹಾನನು 9 : 21 (KNV)
ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
ಯೋಹಾನನು 9 : 22 (KNV)
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಯೋಹಾನನು 9 : 23 (KNV)
ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
ಯೋಹಾನನು 9 : 24 (KNV)
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
ಯೋಹಾನನು 9 : 25 (KNV)
ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
ಯೋಹಾನನು 9 : 26 (KNV)
ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
ಯೋಹಾನನು 9 : 27 (KNV)
ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
ಯೋಹಾನನು 9 : 28 (KNV)
ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
ಯೋಹಾನನು 9 : 29 (KNV)
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ಯೋಹಾನನು 9 : 30 (KNV)
ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
ಯೋಹಾನನು 9 : 31 (KNV)
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
ಯೋಹಾನನು 9 : 32 (KNV)
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
ಯೋಹಾನನು 9 : 33 (KNV)
ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
ಯೋಹಾನನು 9 : 34 (KNV)
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಯೋಹಾನನು 9 : 35 (KNV)
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ಯೋಹಾನನು 9 : 36 (KNV)
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
ಯೋಹಾನನು 9 : 37 (KNV)
ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
ಯೋಹಾನನು 9 : 38 (KNV)
ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
ಯೋಹಾನನು 9 : 39 (KNV)
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
ಯೋಹಾನನು 9 : 40 (KNV)
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
ಯೋಹಾನನು 9 : 41 (KNV)
ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41

BG:

Opacity:

Color:


Size:


Font: