ಅಪೊಸ್ತಲರ ಕೃತ್ಯಗ 13 : 1 (KNV)
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಅಪೊಸ್ತಲರ ಕೃತ್ಯಗ 13 : 2 (KNV)
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 13 : 3 (KNV)
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
ಅಪೊಸ್ತಲರ ಕೃತ್ಯಗ 13 : 4 (KNV)
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 13 : 5 (KNV)
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
ಅಪೊಸ್ತಲರ ಕೃತ್ಯಗ 13 : 6 (KNV)
ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
ಅಪೊಸ್ತಲರ ಕೃತ್ಯಗ 13 : 7 (KNV)
ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
ಅಪೊಸ್ತಲರ ಕೃತ್ಯಗ 13 : 8 (KNV)
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ಅಪೊಸ್ತಲರ ಕೃತ್ಯಗ 13 : 9 (KNV)
ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
ಅಪೊಸ್ತಲರ ಕೃತ್ಯಗ 13 : 10 (KNV)
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ಅಪೊಸ್ತಲರ ಕೃತ್ಯಗ 13 : 11 (KNV)
ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
ಅಪೊಸ್ತಲರ ಕೃತ್ಯಗ 13 : 12 (KNV)
ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
ಅಪೊಸ್ತಲರ ಕೃತ್ಯಗ 13 : 13 (KNV)
ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
ಅಪೊಸ್ತಲರ ಕೃತ್ಯಗ 13 : 14 (KNV)
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಅಪೊಸ್ತಲರ ಕೃತ್ಯಗ 13 : 15 (KNV)
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 13 : 16 (KNV)
ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
ಅಪೊಸ್ತಲರ ಕೃತ್ಯಗ 13 : 17 (KNV)
ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
ಅಪೊಸ್ತಲರ ಕೃತ್ಯಗ 13 : 18 (KNV)
ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
ಅಪೊಸ್ತಲರ ಕೃತ್ಯಗ 13 : 19 (KNV)
ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
ಅಪೊಸ್ತಲರ ಕೃತ್ಯಗ 13 : 20 (KNV)
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
ಅಪೊಸ್ತಲರ ಕೃತ್ಯಗ 13 : 21 (KNV)
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ಅಪೊಸ್ತಲರ ಕೃತ್ಯಗ 13 : 22 (KNV)
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ಅಪೊಸ್ತಲರ ಕೃತ್ಯಗ 13 : 23 (KNV)
ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
ಅಪೊಸ್ತಲರ ಕೃತ್ಯಗ 13 : 24 (KNV)
ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ಅಪೊಸ್ತಲರ ಕೃತ್ಯಗ 13 : 25 (KNV)
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 13 : 26 (KNV)
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಅಪೊಸ್ತಲರ ಕೃತ್ಯಗ 13 : 27 (KNV)
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಅಪೊಸ್ತಲರ ಕೃತ್ಯಗ 13 : 28 (KNV)
ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ಅಪೊಸ್ತಲರ ಕೃತ್ಯಗ 13 : 29 (KNV)
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 13 : 30 (KNV)
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
ಅಪೊಸ್ತಲರ ಕೃತ್ಯಗ 13 : 31 (KNV)
ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ಅಪೊಸ್ತಲರ ಕೃತ್ಯಗ 13 : 32 (KNV)
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಅಪೊಸ್ತಲರ ಕೃತ್ಯಗ 13 : 33 (KNV)
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ಅಪೊಸ್ತಲರ ಕೃತ್ಯಗ 13 : 34 (KNV)
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ಅಪೊಸ್ತಲರ ಕೃತ್ಯಗ 13 : 35 (KNV)
ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
ಅಪೊಸ್ತಲರ ಕೃತ್ಯಗ 13 : 36 (KNV)
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಅಪೊಸ್ತಲರ ಕೃತ್ಯಗ 13 : 37 (KNV)
ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
ಅಪೊಸ್ತಲರ ಕೃತ್ಯಗ 13 : 38 (KNV)
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಅಪೊಸ್ತಲರ ಕೃತ್ಯಗ 13 : 39 (KNV)
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
ಅಪೊಸ್ತಲರ ಕೃತ್ಯಗ 13 : 40 (KNV)
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಅಪೊಸ್ತಲರ ಕೃತ್ಯಗ 13 : 41 (KNV)
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಅಪೊಸ್ತಲರ ಕೃತ್ಯಗ 13 : 42 (KNV)
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
ಅಪೊಸ್ತಲರ ಕೃತ್ಯಗ 13 : 43 (KNV)
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ಅಪೊಸ್ತಲರ ಕೃತ್ಯಗ 13 : 44 (KNV)
ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
ಅಪೊಸ್ತಲರ ಕೃತ್ಯಗ 13 : 45 (KNV)
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ಅಪೊಸ್ತಲರ ಕೃತ್ಯಗ 13 : 46 (KNV)
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಅಪೊಸ್ತಲರ ಕೃತ್ಯಗ 13 : 47 (KNV)
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಅಪೊಸ್ತಲರ ಕೃತ್ಯಗ 13 : 48 (KNV)
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಅಪೊಸ್ತಲರ ಕೃತ್ಯಗ 13 : 49 (KNV)
ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
ಅಪೊಸ್ತಲರ ಕೃತ್ಯಗ 13 : 50 (KNV)
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅಪೊಸ್ತಲರ ಕೃತ್ಯಗ 13 : 51 (KNV)
ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಅಪೊಸ್ತಲರ ಕೃತ್ಯಗ 13 : 52 (KNV)
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52

BG:

Opacity:

Color:


Size:


Font: