ಅಪೊಸ್ತಲರ ಕೃತ್ಯಗ 2 : 1 (KNV)
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ಅಪೊಸ್ತಲರ ಕೃತ್ಯಗ 2 : 2 (KNV)
ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಅಪೊಸ್ತಲರ ಕೃತ್ಯಗ 2 : 3 (KNV)
ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
ಅಪೊಸ್ತಲರ ಕೃತ್ಯಗ 2 : 4 (KNV)
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಅಪೊಸ್ತಲರ ಕೃತ್ಯಗ 2 : 5 (KNV)
ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
ಅಪೊಸ್ತಲರ ಕೃತ್ಯಗ 2 : 6 (KNV)
ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
ಅಪೊಸ್ತಲರ ಕೃತ್ಯಗ 2 : 7 (KNV)
ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
ಅಪೊಸ್ತಲರ ಕೃತ್ಯಗ 2 : 8 (KNV)
ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
ಅಪೊಸ್ತಲರ ಕೃತ್ಯಗ 2 : 9 (KNV)
ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
ಅಪೊಸ್ತಲರ ಕೃತ್ಯಗ 2 : 10 (KNV)
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
ಅಪೊಸ್ತಲರ ಕೃತ್ಯಗ 2 : 11 (KNV)
ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಅಪೊಸ್ತಲರ ಕೃತ್ಯಗ 2 : 12 (KNV)
ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
ಅಪೊಸ್ತಲರ ಕೃತ್ಯಗ 2 : 13 (KNV)
ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
ಅಪೊಸ್ತಲರ ಕೃತ್ಯಗ 2 : 14 (KNV)
ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
ಅಪೊಸ್ತಲರ ಕೃತ್ಯಗ 2 : 15 (KNV)
ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
ಅಪೊಸ್ತಲರ ಕೃತ್ಯಗ 2 : 16 (KNV)
ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
ಅಪೊಸ್ತಲರ ಕೃತ್ಯಗ 2 : 17 (KNV)
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಅಪೊಸ್ತಲರ ಕೃತ್ಯಗ 2 : 18 (KNV)
ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
ಅಪೊಸ್ತಲರ ಕೃತ್ಯಗ 2 : 19 (KNV)
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
ಅಪೊಸ್ತಲರ ಕೃತ್ಯಗ 2 : 20 (KNV)
ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
ಅಪೊಸ್ತಲರ ಕೃತ್ಯಗ 2 : 21 (KNV)
ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
ಅಪೊಸ್ತಲರ ಕೃತ್ಯಗ 2 : 22 (KNV)
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಅಪೊಸ್ತಲರ ಕೃತ್ಯಗ 2 : 23 (KNV)
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಅಪೊಸ್ತಲರ ಕೃತ್ಯಗ 2 : 24 (KNV)
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಅಪೊಸ್ತಲರ ಕೃತ್ಯಗ 2 : 25 (KNV)
ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ಅಪೊಸ್ತಲರ ಕೃತ್ಯಗ 2 : 26 (KNV)
ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
ಅಪೊಸ್ತಲರ ಕೃತ್ಯಗ 2 : 27 (KNV)
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
ಅಪೊಸ್ತಲರ ಕೃತ್ಯಗ 2 : 28 (KNV)
ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
ಅಪೊಸ್ತಲರ ಕೃತ್ಯಗ 2 : 29 (KNV)
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ಅಪೊಸ್ತಲರ ಕೃತ್ಯಗ 2 : 30 (KNV)
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ಅಪೊಸ್ತಲರ ಕೃತ್ಯಗ 2 : 31 (KNV)
ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ಅಪೊಸ್ತಲರ ಕೃತ್ಯಗ 2 : 32 (KNV)
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಅಪೊಸ್ತಲರ ಕೃತ್ಯಗ 2 : 33 (KNV)
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಅಪೊಸ್ತಲರ ಕೃತ್ಯಗ 2 : 34 (KNV)
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ಅಪೊಸ್ತಲರ ಕೃತ್ಯಗ 2 : 35 (KNV)
ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
ಅಪೊಸ್ತಲರ ಕೃತ್ಯಗ 2 : 36 (KNV)
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 2 : 37 (KNV)
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 2 : 38 (KNV)
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಅಪೊಸ್ತಲರ ಕೃತ್ಯಗ 2 : 39 (KNV)
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 2 : 40 (KNV)
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
ಅಪೊಸ್ತಲರ ಕೃತ್ಯಗ 2 : 41 (KNV)
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಅಪೊಸ್ತಲರ ಕೃತ್ಯಗ 2 : 42 (KNV)
ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
ಅಪೊಸ್ತಲರ ಕೃತ್ಯಗ 2 : 43 (KNV)
ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
ಅಪೊಸ್ತಲರ ಕೃತ್ಯಗ 2 : 44 (KNV)
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 2 : 45 (KNV)
ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ಅಪೊಸ್ತಲರ ಕೃತ್ಯಗ 2 : 46 (KNV)
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 2 : 47 (KNV)
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
❮
❯