ಅಪೊಸ್ತಲರ ಕೃತ್ಯಗ 20 : 1 (KNV)
ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
ಅಪೊಸ್ತಲರ ಕೃತ್ಯಗ 20 : 2 (KNV)
ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.
ಅಪೊಸ್ತಲರ ಕೃತ್ಯಗ 20 : 3 (KNV)
ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
ಅಪೊಸ್ತಲರ ಕೃತ್ಯಗ 20 : 4 (KNV)
ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 20 : 5 (KNV)
ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
ಅಪೊಸ್ತಲರ ಕೃತ್ಯಗ 20 : 6 (KNV)
ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
ಅಪೊಸ್ತಲರ ಕೃತ್ಯಗ 20 : 7 (KNV)
ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
ಅಪೊಸ್ತಲರ ಕೃತ್ಯಗ 20 : 8 (KNV)
ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
ಅಪೊಸ್ತಲರ ಕೃತ್ಯಗ 20 : 9 (KNV)
ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
ಅಪೊಸ್ತಲರ ಕೃತ್ಯಗ 20 : 10 (KNV)
ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 20 : 11 (KNV)
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
ಅಪೊಸ್ತಲರ ಕೃತ್ಯಗ 20 : 12 (KNV)
ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
ಅಪೊಸ್ತಲರ ಕೃತ್ಯಗ 20 : 13 (KNV)
ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
ಅಪೊಸ್ತಲರ ಕೃತ್ಯಗ 20 : 14 (KNV)
ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
ಅಪೊಸ್ತಲರ ಕೃತ್ಯಗ 20 : 15 (KNV)
ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
ಅಪೊಸ್ತಲರ ಕೃತ್ಯಗ 20 : 16 (KNV)
ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
ಅಪೊಸ್ತಲರ ಕೃತ್ಯಗ 20 : 17 (KNV)
ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
ಅಪೊಸ್ತಲರ ಕೃತ್ಯಗ 20 : 18 (KNV)
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ಅಪೊಸ್ತಲರ ಕೃತ್ಯಗ 20 : 19 (KNV)
ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
ಅಪೊಸ್ತಲರ ಕೃತ್ಯಗ 20 : 20 (KNV)
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಅಪೊಸ್ತಲರ ಕೃತ್ಯಗ 20 : 21 (KNV)
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಅಪೊಸ್ತಲರ ಕೃತ್ಯಗ 20 : 22 (KNV)
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
ಅಪೊಸ್ತಲರ ಕೃತ್ಯಗ 20 : 23 (KNV)
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 24 (KNV)
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅಪೊಸ್ತಲರ ಕೃತ್ಯಗ 20 : 25 (KNV)
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 26 (KNV)
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ಅಪೊಸ್ತಲರ ಕೃತ್ಯಗ 20 : 27 (KNV)
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಅಪೊಸ್ತಲರ ಕೃತ್ಯಗ 20 : 28 (KNV)
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಅಪೊಸ್ತಲರ ಕೃತ್ಯಗ 20 : 29 (KNV)
ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
ಅಪೊಸ್ತಲರ ಕೃತ್ಯಗ 20 : 30 (KNV)
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಅಪೊಸ್ತಲರ ಕೃತ್ಯಗ 20 : 31 (KNV)
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಅಪೊಸ್ತಲರ ಕೃತ್ಯಗ 20 : 32 (KNV)
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ಅಪೊಸ್ತಲರ ಕೃತ್ಯಗ 20 : 33 (KNV)
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ಅಪೊಸ್ತಲರ ಕೃತ್ಯಗ 20 : 34 (KNV)
ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ಅಪೊಸ್ತಲರ ಕೃತ್ಯಗ 20 : 35 (KNV)
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಅಪೊಸ್ತಲರ ಕೃತ್ಯಗ 20 : 36 (KNV)
ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
ಅಪೊಸ್ತಲರ ಕೃತ್ಯಗ 20 : 37 (KNV)
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 20 : 38 (KNV)
ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: