ಅಪೊಸ್ತಲರ ಕೃತ್ಯಗ 5 : 1 (KNV)
ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
ಅಪೊಸ್ತಲರ ಕೃತ್ಯಗ 5 : 2 (KNV)
ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
ಅಪೊಸ್ತಲರ ಕೃತ್ಯಗ 5 : 3 (KNV)
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಅಪೊಸ್ತಲರ ಕೃತ್ಯಗ 5 : 4 (KNV)
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ಅಪೊಸ್ತಲರ ಕೃತ್ಯಗ 5 : 5 (KNV)
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಅಪೊಸ್ತಲರ ಕೃತ್ಯಗ 5 : 6 (KNV)
ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
ಅಪೊಸ್ತಲರ ಕೃತ್ಯಗ 5 : 7 (KNV)
ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
ಅಪೊಸ್ತಲರ ಕೃತ್ಯಗ 5 : 8 (KNV)
ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
ಅಪೊಸ್ತಲರ ಕೃತ್ಯಗ 5 : 9 (KNV)
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಅಪೊಸ್ತಲರ ಕೃತ್ಯಗ 5 : 10 (KNV)
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
ಅಪೊಸ್ತಲರ ಕೃತ್ಯಗ 5 : 11 (KNV)
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
ಅಪೊಸ್ತಲರ ಕೃತ್ಯಗ 5 : 12 (KNV)
ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
ಅಪೊಸ್ತಲರ ಕೃತ್ಯಗ 5 : 13 (KNV)
ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 14 (KNV)
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಅಪೊಸ್ತಲರ ಕೃತ್ಯಗ 5 : 15 (KNV)
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
ಅಪೊಸ್ತಲರ ಕೃತ್ಯಗ 5 : 16 (KNV)
ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
ಅಪೊಸ್ತಲರ ಕೃತ್ಯಗ 5 : 17 (KNV)
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಅಪೊಸ್ತಲರ ಕೃತ್ಯಗ 5 : 18 (KNV)
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 5 : 19 (KNV)
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಅಪೊಸ್ತಲರ ಕೃತ್ಯಗ 5 : 20 (KNV)
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 21 (KNV)
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
ಅಪೊಸ್ತಲರ ಕೃತ್ಯಗ 5 : 22 (KNV)
ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
ಅಪೊಸ್ತಲರ ಕೃತ್ಯಗ 5 : 23 (KNV)
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 5 : 24 (KNV)
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ಅಪೊಸ್ತಲರ ಕೃತ್ಯಗ 5 : 25 (KNV)
ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
ಅಪೊಸ್ತಲರ ಕೃತ್ಯಗ 5 : 26 (KNV)
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ಅಪೊಸ್ತಲರ ಕೃತ್ಯಗ 5 : 27 (KNV)
ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
ಅಪೊಸ್ತಲರ ಕೃತ್ಯಗ 5 : 28 (KNV)
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಅಪೊಸ್ತಲರ ಕೃತ್ಯಗ 5 : 29 (KNV)
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಅಪೊಸ್ತಲರ ಕೃತ್ಯಗ 5 : 30 (KNV)
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಅಪೊಸ್ತಲರ ಕೃತ್ಯಗ 5 : 31 (KNV)
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಅಪೊಸ್ತಲರ ಕೃತ್ಯಗ 5 : 32 (KNV)
ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 5 : 33 (KNV)
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಅಪೊಸ್ತಲರ ಕೃತ್ಯಗ 5 : 34 (KNV)
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ಅಪೊಸ್ತಲರ ಕೃತ್ಯಗ 5 : 35 (KNV)
ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
ಅಪೊಸ್ತಲರ ಕೃತ್ಯಗ 5 : 36 (KNV)
ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
ಅಪೊಸ್ತಲರ ಕೃತ್ಯಗ 5 : 37 (KNV)
ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 38 (KNV)
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
ಅಪೊಸ್ತಲರ ಕೃತ್ಯಗ 5 : 39 (KNV)
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 40 (KNV)
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಅಪೊಸ್ತಲರ ಕೃತ್ಯಗ 5 : 41 (KNV)
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 5 : 42 (KNV)
ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: