ರೋಮಾಪುರದವರಿಗೆ 14 : 1 (KNV)
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ರೋಮಾಪುರದವರಿಗೆ 14 : 2 (KNV)
ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
ರೋಮಾಪುರದವರಿಗೆ 14 : 3 (KNV)
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ರೋಮಾಪುರದವರಿಗೆ 14 : 4 (KNV)
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ರೋಮಾಪುರದವರಿಗೆ 14 : 5 (KNV)
ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
ರೋಮಾಪುರದವರಿಗೆ 14 : 6 (KNV)
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ರೋಮಾಪುರದವರಿಗೆ 14 : 7 (KNV)
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ರೋಮಾಪುರದವರಿಗೆ 14 : 8 (KNV)
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ರೋಮಾಪುರದವರಿಗೆ 14 : 9 (KNV)
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
ರೋಮಾಪುರದವರಿಗೆ 14 : 10 (KNV)
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ರೋಮಾಪುರದವರಿಗೆ 14 : 11 (KNV)
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
ರೋಮಾಪುರದವರಿಗೆ 14 : 12 (KNV)
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ರೋಮಾಪುರದವರಿಗೆ 14 : 13 (KNV)
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
ರೋಮಾಪುರದವರಿಗೆ 14 : 14 (KNV)
ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
ರೋಮಾಪುರದವರಿಗೆ 14 : 15 (KNV)
ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
ರೋಮಾಪುರದವರಿಗೆ 14 : 16 (KNV)
ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
ರೋಮಾಪುರದವರಿಗೆ 14 : 17 (KNV)
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ರೋಮಾಪುರದವರಿಗೆ 14 : 18 (KNV)
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ರೋಮಾಪುರದವರಿಗೆ 14 : 19 (KNV)
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ರೋಮಾಪುರದವರಿಗೆ 14 : 20 (KNV)
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ರೋಮಾಪುರದವರಿಗೆ 14 : 21 (KNV)
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ರೋಮಾಪುರದವರಿಗೆ 14 : 22 (KNV)
ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ರೋಮಾಪುರದವರಿಗೆ 14 : 23 (KNV)
ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: