ರೋಮಾಪುರದವರಿಗೆ 9 : 1 (KNV)
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ರೋಮಾಪುರದವರಿಗೆ 9 : 2 (KNV)
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ರೋಮಾಪುರದವರಿಗೆ 9 : 3 (KNV)
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
ರೋಮಾಪುರದವರಿಗೆ 9 : 4 (KNV)
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ರೋಮಾಪುರದವರಿಗೆ 9 : 5 (KNV)
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ರೋಮಾಪುರದವರಿಗೆ 9 : 6 (KNV)
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ರೋಮಾಪುರದವರಿಗೆ 9 : 7 (KNV)
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ರೋಮಾಪುರದವರಿಗೆ 9 : 8 (KNV)
ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
ರೋಮಾಪುರದವರಿಗೆ 9 : 9 (KNV)
ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
ರೋಮಾಪುರದವರಿಗೆ 9 : 10 (KNV)
ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
ರೋಮಾಪುರದವರಿಗೆ 9 : 11 (KNV)
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ರೋಮಾಪುರದವರಿಗೆ 9 : 12 (KNV)
ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
ರೋಮಾಪುರದವರಿಗೆ 9 : 13 (KNV)
ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ 9 : 14 (KNV)
ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
ರೋಮಾಪುರದವರಿಗೆ 9 : 15 (KNV)
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ರೋಮಾಪುರದವರಿಗೆ 9 : 16 (KNV)
ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ರೋಮಾಪುರದವರಿಗೆ 9 : 17 (KNV)
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ರೋಮಾಪುರದವರಿಗೆ 9 : 18 (KNV)
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ರೋಮಾಪುರದವರಿಗೆ 9 : 19 (KNV)
ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
ರೋಮಾಪುರದವರಿಗೆ 9 : 20 (KNV)
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ರೋಮಾಪುರದವರಿಗೆ 9 : 21 (KNV)
ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ರೋಮಾಪುರದವರಿಗೆ 9 : 22 (KNV)
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
ರೋಮಾಪುರದವರಿಗೆ 9 : 23 (KNV)
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ರೋಮಾಪುರದವರಿಗೆ 9 : 24 (KNV)
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ರೋಮಾಪುರದವರಿಗೆ 9 : 25 (KNV)
ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
ರೋಮಾಪುರದವರಿಗೆ 9 : 26 (KNV)
ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
ರೋಮಾಪುರದವರಿಗೆ 9 : 27 (KNV)
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ರೋಮಾಪುರದವರಿಗೆ 9 : 28 (KNV)
ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
ರೋಮಾಪುರದವರಿಗೆ 9 : 29 (KNV)
ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
ರೋಮಾಪುರದವರಿಗೆ 9 : 30 (KNV)
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ರೋಮಾಪುರದವರಿಗೆ 9 : 31 (KNV)
ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
ರೋಮಾಪುರದವರಿಗೆ 9 : 32 (KNV)
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
ರೋಮಾಪುರದವರಿಗೆ 9 : 33 (KNV)
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33