1 ಕೊರಿಂಥದವರಿಗೆ 14 : 1 (KNV)
ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
1 ಕೊರಿಂಥದವರಿಗೆ 14 : 2 (KNV)
ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
1 ಕೊರಿಂಥದವರಿಗೆ 14 : 3 (KNV)
ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
1 ಕೊರಿಂಥದವರಿಗೆ 14 : 4 (KNV)
ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
1 ಕೊರಿಂಥದವರಿಗೆ 14 : 5 (KNV)
ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
1 ಕೊರಿಂಥದವರಿಗೆ 14 : 6 (KNV)
ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
1 ಕೊರಿಂಥದವರಿಗೆ 14 : 7 (KNV)
ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
1 ಕೊರಿಂಥದವರಿಗೆ 14 : 8 (KNV)
ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
1 ಕೊರಿಂಥದವರಿಗೆ 14 : 9 (KNV)
ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.
1 ಕೊರಿಂಥದವರಿಗೆ 14 : 10 (KNV)
ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.
1 ಕೊರಿಂಥದವರಿಗೆ 14 : 11 (KNV)
ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
1 ಕೊರಿಂಥದವರಿಗೆ 14 : 12 (KNV)
ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
1 ಕೊರಿಂಥದವರಿಗೆ 14 : 13 (KNV)
ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
1 ಕೊರಿಂಥದವರಿಗೆ 14 : 14 (KNV)
ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
1 ಕೊರಿಂಥದವರಿಗೆ 14 : 15 (KNV)
ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
1 ಕೊರಿಂಥದವರಿಗೆ 14 : 16 (KNV)
ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್‌ ಎಂದು ಹೇಳುವದು ಹೇಗೆ?
1 ಕೊರಿಂಥದವರಿಗೆ 14 : 17 (KNV)
ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
1 ಕೊರಿಂಥದವರಿಗೆ 14 : 18 (KNV)
ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.
1 ಕೊರಿಂಥದವರಿಗೆ 14 : 19 (KNV)
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
1 ಕೊರಿಂಥದವರಿಗೆ 14 : 20 (KNV)
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
1 ಕೊರಿಂಥದವರಿಗೆ 14 : 21 (KNV)
ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.
1 ಕೊರಿಂಥದವರಿಗೆ 14 : 22 (KNV)
ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
1 ಕೊರಿಂಥದವರಿಗೆ 14 : 23 (KNV)
ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
1 ಕೊರಿಂಥದವರಿಗೆ 14 : 24 (KNV)
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
1 ಕೊರಿಂಥದವರಿಗೆ 14 : 25 (KNV)
ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
1 ಕೊರಿಂಥದವರಿಗೆ 14 : 26 (KNV)
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
1 ಕೊರಿಂಥದವರಿಗೆ 14 : 27 (KNV)
ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
1 ಕೊರಿಂಥದವರಿಗೆ 14 : 28 (KNV)
ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
1 ಕೊರಿಂಥದವರಿಗೆ 14 : 29 (KNV)
ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
1 ಕೊರಿಂಥದವರಿಗೆ 14 : 30 (KNV)
ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
1 ಕೊರಿಂಥದವರಿಗೆ 14 : 31 (KNV)
ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
1 ಕೊರಿಂಥದವರಿಗೆ 14 : 32 (KNV)
ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
1 ಕೊರಿಂಥದವರಿಗೆ 14 : 33 (KNV)
ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
1 ಕೊರಿಂಥದವರಿಗೆ 14 : 34 (KNV)
ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
1 ಕೊರಿಂಥದವರಿಗೆ 14 : 35 (KNV)
ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
1 ಕೊರಿಂಥದವರಿಗೆ 14 : 36 (KNV)
ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
1 ಕೊರಿಂಥದವರಿಗೆ 14 : 37 (KNV)
ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
1 ಕೊರಿಂಥದವರಿಗೆ 14 : 38 (KNV)
ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
1 ಕೊರಿಂಥದವರಿಗೆ 14 : 39 (KNV)
ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
1 ಕೊರಿಂಥದವರಿಗೆ 14 : 40 (KNV)
ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: