1 ಕೊರಿಂಥದವರಿಗೆ 4 : 1 (KNV)
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
1 ಕೊರಿಂಥದವರಿಗೆ 4 : 2 (KNV)
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
1 ಕೊರಿಂಥದವರಿಗೆ 4 : 3 (KNV)
ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
1 ಕೊರಿಂಥದವರಿಗೆ 4 : 4 (KNV)
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
1 ಕೊರಿಂಥದವರಿಗೆ 4 : 5 (KNV)
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
1 ಕೊರಿಂಥದವರಿಗೆ 4 : 6 (KNV)
ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
1 ಕೊರಿಂಥದವರಿಗೆ 4 : 7 (KNV)
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
1 ಕೊರಿಂಥದವರಿಗೆ 4 : 8 (KNV)
ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
1 ಕೊರಿಂಥದವರಿಗೆ 4 : 9 (KNV)
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
1 ಕೊರಿಂಥದವರಿಗೆ 4 : 10 (KNV)
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
1 ಕೊರಿಂಥದವರಿಗೆ 4 : 11 (KNV)
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
1 ಕೊರಿಂಥದವರಿಗೆ 4 : 12 (KNV)
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
1 ಕೊರಿಂಥದವರಿಗೆ 4 : 13 (KNV)
ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
1 ಕೊರಿಂಥದವರಿಗೆ 4 : 14 (KNV)
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
1 ಕೊರಿಂಥದವರಿಗೆ 4 : 15 (KNV)
ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
1 ಕೊರಿಂಥದವರಿಗೆ 4 : 16 (KNV)
ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಕೊರಿಂಥದವರಿಗೆ 4 : 17 (KNV)
ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
1 ಕೊರಿಂಥದವರಿಗೆ 4 : 18 (KNV)
ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
1 ಕೊರಿಂಥದವರಿಗೆ 4 : 19 (KNV)
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
1 ಕೊರಿಂಥದವರಿಗೆ 4 : 20 (KNV)
ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.
1 ಕೊರಿಂಥದವರಿಗೆ 4 : 21 (KNV)
ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
❮
❯