2 ಕೊರಿಂಥದವರಿಗೆ 4 : 1 (KNV)
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
2 ಕೊರಿಂಥದವರಿಗೆ 4 : 2 (KNV)
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
2 ಕೊರಿಂಥದವರಿಗೆ 4 : 3 (KNV)
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
2 ಕೊರಿಂಥದವರಿಗೆ 4 : 4 (KNV)
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
2 ಕೊರಿಂಥದವರಿಗೆ 4 : 5 (KNV)
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
2 ಕೊರಿಂಥದವರಿಗೆ 4 : 6 (KNV)
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
2 ಕೊರಿಂಥದವರಿಗೆ 4 : 7 (KNV)
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
2 ಕೊರಿಂಥದವರಿಗೆ 4 : 8 (KNV)
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
2 ಕೊರಿಂಥದವರಿಗೆ 4 : 9 (KNV)
ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
2 ಕೊರಿಂಥದವರಿಗೆ 4 : 10 (KNV)
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
2 ಕೊರಿಂಥದವರಿಗೆ 4 : 11 (KNV)
ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
2 ಕೊರಿಂಥದವರಿಗೆ 4 : 12 (KNV)
ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
2 ಕೊರಿಂಥದವರಿಗೆ 4 : 13 (KNV)
ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
2 ಕೊರಿಂಥದವರಿಗೆ 4 : 14 (KNV)
ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
2 ಕೊರಿಂಥದವರಿಗೆ 4 : 15 (KNV)
ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
2 ಕೊರಿಂಥದವರಿಗೆ 4 : 16 (KNV)
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
2 ಕೊರಿಂಥದವರಿಗೆ 4 : 17 (KNV)
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
2 ಕೊರಿಂಥದವರಿಗೆ 4 : 18 (KNV)
ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: