2 ಕೊರಿಂಥದವರಿಗೆ 9 : 1 (KNV)
ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
2 ಕೊರಿಂಥದವರಿಗೆ 9 : 2 (KNV)
ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
2 ಕೊರಿಂಥದವರಿಗೆ 9 : 3 (KNV)
ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
2 ಕೊರಿಂಥದವರಿಗೆ 9 : 4 (KNV)
ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
2 ಕೊರಿಂಥದವರಿಗೆ 9 : 5 (KNV)
ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
2 ಕೊರಿಂಥದವರಿಗೆ 9 : 6 (KNV)
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
2 ಕೊರಿಂಥದವರಿಗೆ 9 : 7 (KNV)
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
2 ಕೊರಿಂಥದವರಿಗೆ 9 : 8 (KNV)
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
2 ಕೊರಿಂಥದವರಿಗೆ 9 : 9 (KNV)
(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
2 ಕೊರಿಂಥದವರಿಗೆ 9 : 10 (KNV)
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
2 ಕೊರಿಂಥದವರಿಗೆ 9 : 11 (KNV)
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
2 ಕೊರಿಂಥದವರಿಗೆ 9 : 12 (KNV)
ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
2 ಕೊರಿಂಥದವರಿಗೆ 9 : 13 (KNV)
ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
2 ಕೊರಿಂಥದವರಿಗೆ 9 : 14 (KNV)
ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
2 ಕೊರಿಂಥದವರಿಗೆ 9 : 15 (KNV)
ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.

1 2 3 4 5 6 7 8 9 10 11 12 13 14 15

BG:

Opacity:

Color:


Size:


Font: