ಧರ್ಮೋಪದೇಶಕಾಂಡ 10 : 1 (KNV)
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
ಧರ್ಮೋಪದೇಶಕಾಂಡ 10 : 2 (KNV)
ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
ಧರ್ಮೋಪದೇಶಕಾಂಡ 10 : 3 (KNV)
ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
ಧರ್ಮೋಪದೇಶಕಾಂಡ 10 : 4 (KNV)
ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
ಧರ್ಮೋಪದೇಶಕಾಂಡ 10 : 5 (KNV)
ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
ಧರ್ಮೋಪದೇಶಕಾಂಡ 10 : 6 (KNV)
ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
ಧರ್ಮೋಪದೇಶಕಾಂಡ 10 : 7 (KNV)
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
ಧರ್ಮೋಪದೇಶಕಾಂಡ 10 : 8 (KNV)
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ಧರ್ಮೋಪದೇಶಕಾಂಡ 10 : 9 (KNV)
ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
ಧರ್ಮೋಪದೇಶಕಾಂಡ 10 : 10 (KNV)
ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
ಧರ್ಮೋಪದೇಶಕಾಂಡ 10 : 11 (KNV)
ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
ಧರ್ಮೋಪದೇಶಕಾಂಡ 10 : 12 (KNV)
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ಧರ್ಮೋಪದೇಶಕಾಂಡ 10 : 13 (KNV)
ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
ಧರ್ಮೋಪದೇಶಕಾಂಡ 10 : 14 (KNV)
ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
ಧರ್ಮೋಪದೇಶಕಾಂಡ 10 : 15 (KNV)
ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
ಧರ್ಮೋಪದೇಶಕಾಂಡ 10 : 16 (KNV)
ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
ಧರ್ಮೋಪದೇಶಕಾಂಡ 10 : 17 (KNV)
ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ಧರ್ಮೋಪದೇಶಕಾಂಡ 10 : 18 (KNV)
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
ಧರ್ಮೋಪದೇಶಕಾಂಡ 10 : 19 (KNV)
ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
ಧರ್ಮೋಪದೇಶಕಾಂಡ 10 : 20 (KNV)
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಧರ್ಮೋಪದೇಶಕಾಂಡ 10 : 21 (KNV)
ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
ಧರ್ಮೋಪದೇಶಕಾಂಡ 10 : 22 (KNV)
ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
❮
❯