ಧರ್ಮೋಪದೇಶಕಾಂಡ 25 : 1 (KNV)
ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
ಧರ್ಮೋಪದೇಶಕಾಂಡ 25 : 2 (KNV)
ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
ಧರ್ಮೋಪದೇಶಕಾಂಡ 25 : 3 (KNV)
ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
ಧರ್ಮೋಪದೇಶಕಾಂಡ 25 : 4 (KNV)
ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
ಧರ್ಮೋಪದೇಶಕಾಂಡ 25 : 5 (KNV)
ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
ಧರ್ಮೋಪದೇಶಕಾಂಡ 25 : 6 (KNV)
ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
ಧರ್ಮೋಪದೇಶಕಾಂಡ 25 : 7 (KNV)
ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
ಧರ್ಮೋಪದೇಶಕಾಂಡ 25 : 8 (KNV)
ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
ಧರ್ಮೋಪದೇಶಕಾಂಡ 25 : 9 (KNV)
ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
ಧರ್ಮೋಪದೇಶಕಾಂಡ 25 : 10 (KNV)
ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
ಧರ್ಮೋಪದೇಶಕಾಂಡ 25 : 11 (KNV)
ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
ಧರ್ಮೋಪದೇಶಕಾಂಡ 25 : 12 (KNV)
ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.
ಧರ್ಮೋಪದೇಶಕಾಂಡ 25 : 13 (KNV)
ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
ಧರ್ಮೋಪದೇಶಕಾಂಡ 25 : 14 (KNV)
ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
ಧರ್ಮೋಪದೇಶಕಾಂಡ 25 : 15 (KNV)
ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
ಧರ್ಮೋಪದೇಶಕಾಂಡ 25 : 16 (KNV)
ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
ಧರ್ಮೋಪದೇಶಕಾಂಡ 25 : 17 (KNV)
ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
ಧರ್ಮೋಪದೇಶಕಾಂಡ 25 : 18 (KNV)
ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.
ಧರ್ಮೋಪದೇಶಕಾಂಡ 25 : 19 (KNV)
ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
❮
❯