ಧರ್ಮೋಪದೇಶಕಾಂಡ 3 : 1 (KNV)
ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
ಧರ್ಮೋಪದೇಶಕಾಂಡ 3 : 2 (KNV)
ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
ಧರ್ಮೋಪದೇಶಕಾಂಡ 3 : 3 (KNV)
ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
ಧರ್ಮೋಪದೇಶಕಾಂಡ 3 : 4 (KNV)
ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
ಧರ್ಮೋಪದೇಶಕಾಂಡ 3 : 5 (KNV)
ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
ಧರ್ಮೋಪದೇಶಕಾಂಡ 3 : 6 (KNV)
ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
ಧರ್ಮೋಪದೇಶಕಾಂಡ 3 : 7 (KNV)
ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
ಧರ್ಮೋಪದೇಶಕಾಂಡ 3 : 8 (KNV)
ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
ಧರ್ಮೋಪದೇಶಕಾಂಡ 3 : 9 (KNV)
(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
ಧರ್ಮೋಪದೇಶಕಾಂಡ 3 : 10 (KNV)
ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
ಧರ್ಮೋಪದೇಶಕಾಂಡ 3 : 11 (KNV)
ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಧರ್ಮೋಪದೇಶಕಾಂಡ 3 : 12 (KNV)
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ಧರ್ಮೋಪದೇಶಕಾಂಡ 3 : 13 (KNV)
ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
ಧರ್ಮೋಪದೇಶಕಾಂಡ 3 : 14 (KNV)
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.
ಧರ್ಮೋಪದೇಶಕಾಂಡ 3 : 15 (KNV)
ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
ಧರ್ಮೋಪದೇಶಕಾಂಡ 3 : 16 (KNV)
ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.
ಧರ್ಮೋಪದೇಶಕಾಂಡ 3 : 17 (KNV)
ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ಧರ್ಮೋಪದೇಶಕಾಂಡ 3 : 18 (KNV)
ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
ಧರ್ಮೋಪದೇಶಕಾಂಡ 3 : 19 (KNV)
ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
ಧರ್ಮೋಪದೇಶಕಾಂಡ 3 : 20 (KNV)
ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
ಧರ್ಮೋಪದೇಶಕಾಂಡ 3 : 21 (KNV)
ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
ಧರ್ಮೋಪದೇಶಕಾಂಡ 3 : 22 (KNV)
ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
ಧರ್ಮೋಪದೇಶಕಾಂಡ 3 : 23 (KNV)
ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
ಧರ್ಮೋಪದೇಶಕಾಂಡ 3 : 24 (KNV)
ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
ಧರ್ಮೋಪದೇಶಕಾಂಡ 3 : 25 (KNV)
ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
ಧರ್ಮೋಪದೇಶಕಾಂಡ 3 : 26 (KNV)
ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
ಧರ್ಮೋಪದೇಶಕಾಂಡ 3 : 27 (KNV)
ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
ಧರ್ಮೋಪದೇಶಕಾಂಡ 3 : 28 (KNV)
ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
ಧರ್ಮೋಪದೇಶಕಾಂಡ 3 : 29 (KNV)
ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: