ಧರ್ಮೋಪದೇಶಕಾಂಡ 9 : 1 (KNV)
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ಧರ್ಮೋಪದೇಶಕಾಂಡ 9 : 2 (KNV)
ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
ಧರ್ಮೋಪದೇಶಕಾಂಡ 9 : 3 (KNV)
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ಧರ್ಮೋಪದೇಶಕಾಂಡ 9 : 4 (KNV)
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಧರ್ಮೋಪದೇಶಕಾಂಡ 9 : 5 (KNV)
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಧರ್ಮೋಪದೇಶಕಾಂಡ 9 : 6 (KNV)
ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
ಧರ್ಮೋಪದೇಶಕಾಂಡ 9 : 7 (KNV)
ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
ಧರ್ಮೋಪದೇಶಕಾಂಡ 9 : 8 (KNV)
ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
ಧರ್ಮೋಪದೇಶಕಾಂಡ 9 : 9 (KNV)
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ಧರ್ಮೋಪದೇಶಕಾಂಡ 9 : 10 (KNV)
ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
ಧರ್ಮೋಪದೇಶಕಾಂಡ 9 : 11 (KNV)
ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
ಧರ್ಮೋಪದೇಶಕಾಂಡ 9 : 12 (KNV)
ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
ಧರ್ಮೋಪದೇಶಕಾಂಡ 9 : 13 (KNV)
ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
ಧರ್ಮೋಪದೇಶಕಾಂಡ 9 : 14 (KNV)
ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
ಧರ್ಮೋಪದೇಶಕಾಂಡ 9 : 15 (KNV)
ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
ಧರ್ಮೋಪದೇಶಕಾಂಡ 9 : 16 (KNV)
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
ಧರ್ಮೋಪದೇಶಕಾಂಡ 9 : 17 (KNV)
ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
ಧರ್ಮೋಪದೇಶಕಾಂಡ 9 : 18 (KNV)
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ಧರ್ಮೋಪದೇಶಕಾಂಡ 9 : 19 (KNV)
ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
ಧರ್ಮೋಪದೇಶಕಾಂಡ 9 : 20 (KNV)
ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
ಧರ್ಮೋಪದೇಶಕಾಂಡ 9 : 21 (KNV)
ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
ಧರ್ಮೋಪದೇಶಕಾಂಡ 9 : 22 (KNV)
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
ಧರ್ಮೋಪದೇಶಕಾಂಡ 9 : 23 (KNV)
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
ಧರ್ಮೋಪದೇಶಕಾಂಡ 9 : 24 (KNV)
ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
ಧರ್ಮೋಪದೇಶಕಾಂಡ 9 : 25 (KNV)
ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
ಧರ್ಮೋಪದೇಶಕಾಂಡ 9 : 26 (KNV)
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಧರ್ಮೋಪದೇಶಕಾಂಡ 9 : 27 (KNV)
ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
ಧರ್ಮೋಪದೇಶಕಾಂಡ 9 : 28 (KNV)
ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.
ಧರ್ಮೋಪದೇಶಕಾಂಡ 9 : 29 (KNV)
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
❮
❯