1 ತಿಮೊಥೆಯನಿಗೆ 5 : 1 (KNV)
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
1 ತಿಮೊಥೆಯನಿಗೆ 5 : 2 (KNV)
ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
1 ತಿಮೊಥೆಯನಿಗೆ 5 : 3 (KNV)
ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
1 ತಿಮೊಥೆಯನಿಗೆ 5 : 4 (KNV)
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
1 ತಿಮೊಥೆಯನಿಗೆ 5 : 5 (KNV)
ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
1 ತಿಮೊಥೆಯನಿಗೆ 5 : 6 (KNV)
ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
1 ತಿಮೊಥೆಯನಿಗೆ 5 : 7 (KNV)
ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
1 ತಿಮೊಥೆಯನಿಗೆ 5 : 8 (KNV)
ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
1 ತಿಮೊಥೆಯನಿಗೆ 5 : 9 (KNV)
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
1 ತಿಮೊಥೆಯನಿಗೆ 5 : 10 (KNV)
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
1 ತಿಮೊಥೆಯನಿಗೆ 5 : 11 (KNV)
ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
1 ತಿಮೊಥೆಯನಿಗೆ 5 : 12 (KNV)
ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
1 ತಿಮೊಥೆಯನಿಗೆ 5 : 13 (KNV)
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
1 ತಿಮೊಥೆಯನಿಗೆ 5 : 14 (KNV)
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
1 ತಿಮೊಥೆಯನಿಗೆ 5 : 15 (KNV)
ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
1 ತಿಮೊಥೆಯನಿಗೆ 5 : 16 (KNV)
ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
1 ತಿಮೊಥೆಯನಿಗೆ 5 : 17 (KNV)
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
1 ತಿಮೊಥೆಯನಿಗೆ 5 : 18 (KNV)
ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
1 ತಿಮೊಥೆಯನಿಗೆ 5 : 19 (KNV)
(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
1 ತಿಮೊಥೆಯನಿಗೆ 5 : 20 (KNV)
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
1 ತಿಮೊಥೆಯನಿಗೆ 5 : 21 (KNV)
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
1 ತಿಮೊಥೆಯನಿಗೆ 5 : 22 (KNV)
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
1 ತಿಮೊಥೆಯನಿಗೆ 5 : 23 (KNV)
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
1 ತಿಮೊಥೆಯನಿಗೆ 5 : 24 (KNV)
ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.
1 ತಿಮೊಥೆಯನಿಗೆ 5 : 25 (KNV)
ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
❮
❯