ತೀತನಿಗೆ 2 : 1 (KNV)
ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
ತೀತನಿಗೆ 2 : 2 (KNV)
ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
ತೀತನಿಗೆ 2 : 3 (KNV)
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
ತೀತನಿಗೆ 2 : 4 (KNV)
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ತೀತನಿಗೆ 2 : 5 (KNV)
ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
ತೀತನಿಗೆ 2 : 6 (KNV)
ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
ತೀತನಿಗೆ 2 : 7 (KNV)
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ತೀತನಿಗೆ 2 : 8 (KNV)
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ತೀತನಿಗೆ 2 : 9 (KNV)
ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
ತೀತನಿಗೆ 2 : 10 (KNV)
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ತೀತನಿಗೆ 2 : 11 (KNV)
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ತೀತನಿಗೆ 2 : 12 (KNV)
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ತೀತನಿಗೆ 2 : 13 (KNV)
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ತೀತನಿಗೆ 2 : 14 (KNV)
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.
ತೀತನಿಗೆ 2 : 15 (KNV)
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

1 2 3 4 5 6 7 8 9 10 11 12 13 14 15