ಇಬ್ರಿಯರಿಗೆ 10 : 1 (KNV)
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
ಇಬ್ರಿಯರಿಗೆ 10 : 2 (KNV)
ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
ಇಬ್ರಿಯರಿಗೆ 10 : 3 (KNV)
ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
ಇಬ್ರಿಯರಿಗೆ 10 : 4 (KNV)
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಇಬ್ರಿಯರಿಗೆ 10 : 5 (KNV)
ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
ಇಬ್ರಿಯರಿಗೆ 10 : 6 (KNV)
ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
ಇಬ್ರಿಯರಿಗೆ 10 : 7 (KNV)
ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
ಇಬ್ರಿಯರಿಗೆ 10 : 8 (KNV)
ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
ಇಬ್ರಿಯರಿಗೆ 10 : 9 (KNV)
ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
ಇಬ್ರಿಯರಿಗೆ 10 : 10 (KNV)
ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
ಇಬ್ರಿಯರಿಗೆ 10 : 11 (KNV)
ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
ಇಬ್ರಿಯರಿಗೆ 10 : 12 (KNV)
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ಇಬ್ರಿಯರಿಗೆ 10 : 13 (KNV)
ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
ಇಬ್ರಿಯರಿಗೆ 10 : 14 (KNV)
ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
ಇಬ್ರಿಯರಿಗೆ 10 : 15 (KNV)
ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
ಇಬ್ರಿಯರಿಗೆ 10 : 16 (KNV)
ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
ಇಬ್ರಿಯರಿಗೆ 10 : 17 (KNV)
ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಇಬ್ರಿಯರಿಗೆ 10 : 18 (KNV)
ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
ಇಬ್ರಿಯರಿಗೆ 10 : 19 (KNV)
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ಇಬ್ರಿಯರಿಗೆ 10 : 20 (KNV)
ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
ಇಬ್ರಿಯರಿಗೆ 10 : 21 (KNV)
ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
ಇಬ್ರಿಯರಿಗೆ 10 : 22 (KNV)
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಇಬ್ರಿಯರಿಗೆ 10 : 23 (KNV)
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ಇಬ್ರಿಯರಿಗೆ 10 : 24 (KNV)
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
ಇಬ್ರಿಯರಿಗೆ 10 : 25 (KNV)
ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
ಇಬ್ರಿಯರಿಗೆ 10 : 26 (KNV)
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಇಬ್ರಿಯರಿಗೆ 10 : 27 (KNV)
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
ಇಬ್ರಿಯರಿಗೆ 10 : 28 (KNV)
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ಇಬ್ರಿಯರಿಗೆ 10 : 29 (KNV)
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಇಬ್ರಿಯರಿಗೆ 10 : 30 (KNV)
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ಇಬ್ರಿಯರಿಗೆ 10 : 31 (KNV)
ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
ಇಬ್ರಿಯರಿಗೆ 10 : 32 (KNV)
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ಇಬ್ರಿಯರಿಗೆ 10 : 33 (KNV)
ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
ಇಬ್ರಿಯರಿಗೆ 10 : 34 (KNV)
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಇಬ್ರಿಯರಿಗೆ 10 : 35 (KNV)
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ಇಬ್ರಿಯರಿಗೆ 10 : 36 (KNV)
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ಇಬ್ರಿಯರಿಗೆ 10 : 37 (KNV)
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
ಇಬ್ರಿಯರಿಗೆ 10 : 38 (KNV)
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಇಬ್ರಿಯರಿಗೆ 10 : 39 (KNV)
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: