ಇಬ್ರಿಯರಿಗೆ 13 : 1 (KNV)
ಸಹೋದರ ಪ್ರೀತಿಯು ನೆಲೆಯಾಗಿರಲಿ.
ಇಬ್ರಿಯರಿಗೆ 13 : 2 (KNV)
ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
ಇಬ್ರಿಯರಿಗೆ 13 : 3 (KNV)
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
ಇಬ್ರಿಯರಿಗೆ 13 : 4 (KNV)
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ಇಬ್ರಿಯರಿಗೆ 13 : 5 (KNV)
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ಇಬ್ರಿಯರಿಗೆ 13 : 6 (KNV)
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಇಬ್ರಿಯರಿಗೆ 13 : 7 (KNV)
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ಇಬ್ರಿಯರಿಗೆ 13 : 8 (KNV)
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
ಇಬ್ರಿಯರಿಗೆ 13 : 9 (KNV)
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ಇಬ್ರಿಯರಿಗೆ 13 : 10 (KNV)
ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ಇಬ್ರಿಯರಿಗೆ 13 : 11 (KNV)
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
ಇಬ್ರಿಯರಿಗೆ 13 : 12 (KNV)
ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
ಇಬ್ರಿಯರಿಗೆ 13 : 13 (KNV)
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ಇಬ್ರಿಯರಿಗೆ 13 : 14 (KNV)
ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
ಇಬ್ರಿಯರಿಗೆ 13 : 15 (KNV)
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ಇಬ್ರಿಯರಿಗೆ 13 : 16 (KNV)
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಇಬ್ರಿಯರಿಗೆ 13 : 17 (KNV)
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ಇಬ್ರಿಯರಿಗೆ 13 : 18 (KNV)
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ಇಬ್ರಿಯರಿಗೆ 13 : 19 (KNV)
ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
ಇಬ್ರಿಯರಿಗೆ 13 : 20 (KNV)
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಇಬ್ರಿಯರಿಗೆ 13 : 21 (KNV)
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಇಬ್ರಿಯರಿಗೆ 13 : 22 (KNV)
ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
ಇಬ್ರಿಯರಿಗೆ 13 : 23 (KNV)
ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
ಇಬ್ರಿಯರಿಗೆ 13 : 24 (KNV)
ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.
ಇಬ್ರಿಯರಿಗೆ 13 : 25 (KNV)
ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
❮
❯